day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj *ಲಸಿಕೆ ಕೊಡಿ ಇಲ್ಲ ಅಧೀಕಾರ ಬಿಡಿ*ಮೂರನೇ ಕೋವಿಡ್ ಅಲೆಯಿಂದ ಕರ್ನಾಟಕವನ್ನು ರಕ್ಷಿಸಬೇಕು#avintvcom – AVIN TV

लाइव कैलेंडर

May 2024
M T W T F S S
 12345
6789101112
13141516171819
20212223242526
2728293031  

AVIN TV

Latest Online Breaking News

*ಲಸಿಕೆ ಕೊಡಿ ಇಲ್ಲ ಅಧೀಕಾರ ಬಿಡಿ*ಮೂರನೇ ಕೋವಿಡ್ ಅಲೆಯಿಂದ ಕರ್ನಾಟಕವನ್ನು ರಕ್ಷಿಸಬೇಕು#avintvcom

Featured Video Play Icon
post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

*ಲಸಿಕೆ ಕೊಡಿ ಇಲ್ಲ ಅಧೀಕಾರ ಬಿಡಿ*

 

ಕರ್ನಾಟಕದ ಪ್ರತಿಯೊಬ್ಬ ಪ್ರಜೆಗೂ ಸೆಪ್ಟೆಂಬರ್ ತಿಂಗಳೊಳಗೆ ಎರಡೂ ಡೋಸ್ ಲಸಿಕೆಗಳನ್ನು ನೀಡಿ,
ಮೂರನೇ ಕೋವಿಡ್ ಅಲೆಯಿಂದ ಕರ್ನಾಟಕವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿ (ಜೂ.10)ಬೆಳಿಗ್ಗೆ 10.ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯದಾದ್ಯಂತ ಸಾವಿರಾರು ಪ್ರತಿಭಟನೆಗಳು ನಡೆಯಿತು.
, ಜಿಲ್ಲೆಯಲ್ಲೂ ಸಹ ನೂರಾರು ಪ್ರತಿಭಟನೆಗಳು ನಡೆದಿವೆ.

ಕೋವಿಡ್ ಎರಡನೇ ಅಲೆಯಲ್ಲಿ ಸರ್ಕಾರದ ಅಧಿಕೃತ ಅಂಕಿಅಂಶಗಳ ಪ್ರಕಾರವೇ ಮೂವತ್ತು ಸಾವಿರಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ, ವಾಸ್ತವದಲ್ಲಿ ಕರೋನಾದಿಂದ ಸತ್ತವರ ಸಂಖ್ಯೆ ಇದಕ್ಕಿಂತ ಹಲವು ಪಟ್ಟು ಹೆಚ್ಚಾಗಿದೆ. ಸಾವಿರಾರು ಮಕ್ಕಳು ಅನಾಥರಾಗಿದ್ದಾರೆ.‌ ಮೂರನೇ ಅಲೆಯನ್ನು ತಡೆದುಕೊಳ್ಳುವ ಶಕ್ತಿ ನಮಗಿಲ್ಲ,
ಹೀಗಾಗಿ ತ್ವರಿತಗತಿಯಲ್ಲಿ ಲಸಿಕೆ ಕೊಡುವ ಕಾರ್ಯ ನಡೆಯಬೇಕು ಎಂದು ವೇದಿಕೆ‌ ಕಾರ್ಯಕರ್ತರು ರಾಜ್ಯ ಮತ್ತು ಒಕ್ಕೂಟ ಸರ್ಕಾರಗಳನ್ನು ಒತ್ತಾಯಿಸಿದ್ದಾರೆ.

ಜೂ.10ರಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರ ಜನ್ಮದಿನವಾಗಿದ್ದು, ಕರವೇ ಕಾರ್ಯಕರ್ತರು ಜನಸಾಮಾನ್ಯರ ಜೀವ ರಕ್ಷಣೆಯ ಹಕ್ಕೊತ್ತಾಯವನ್ನು ಇಟ್ಟುಕೊಂಡು ‘ಪ್ರತಿಭಟನಾ ದಿನ’ ವನ್ನಾಗಿ ಆಚರಿಸಿದ್ದಾರೆ.

ಹಕ್ಕೊತ್ತಾಯಗಳು

1. ಉಚಿತ ಲಸಿಕೆ

ರಾಜ್ಯದ ಎಲ್ಲ ನಾಗರಿಕರಿಗೂ ಬಡವ-ಶ್ರೀಮಂತನೆಂಬ ಭೇದವಿಲ್ಲದೆ ಉಚಿತವಾಗಿಯೇ ಲಸಿಕೆ ಕೊಡಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ಹಣಕ್ಕೆ ಸಿಗುವ ಲಸಿಕೆಯಿಂದಾಗಿ ಅಸಮಾನತೆ ಸೃಷ್ಟಿಯಾಗುತ್ತದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳಲ್ಲೂ ಉಚಿತವಾಗಿಯೇ ಲಸಿಕೆ ನೀಡಬೇಕು. ಹಲವಾರು ದೇಶಗಳಲ್ಲಿ ಯಾವ ರೀತಿ ಒಂದೇ ಒಂದು ಲಸಿಕೆಯನ್ನು ಮಾರಾಟಕ್ಕೆ ಇಟ್ಟಿಲ್ಲವೋ ಹಾಗೆಯೇ ಭಾರತದಲ್ಲೂ ಸಹ ಲಸಿಕೆ ಮಾರಾಟದ ವಿಷಯವಾಗಬಾರದು. ಖಾಸಗಿ ಆಸ್ಪತ್ರೆ, ಸಂಸ್ಥೆಗಳಿಗೆ ನೀಡಿರುವ ಶೇ 25 ರಷ್ಟು ವ್ಯಾಕ್ಸಿನ್ ಕೊಳ್ಳುವ ಅವಕಾಶವನ್ನು ರದ್ದುಗೊಳಿಸಿ, ನೂರಕ್ಕೆ ನೂರು ಲಸಿಕೆಗಳು ಉಚಿತವಾಗಿಯೇ, ಸರ್ಕಾರದಿಂದಲೇ ನೀಡಬೇಕು.

2. ಕಾಲಮಿತಿಯೊಳಗೆ ಲಸಿಕೆ

ಕೋವಿಡ್ ಮೂರನೇ ಅಲೆ ಅಕ್ಟೋಬರ್ ತಿಂಗಳಿನಲ್ಲಿ ಆರಂಭವಾಗಬಹುದು ಎಂದು ತಜ್ಞರು ಅಭಿಪ್ರಾಯಪಡುತ್ತಿರುವುದರಿಂದ ಸೆಪ್ಟೆಂಬರ್ ಅಂತ್ಯದೊಳಗೆ ಎರಡೂ ಡೋಸ್ ಲಸಿಕೆಗಳನ್ನು ಕರ್ನಾಟಕದ ಸಮಸ್ತ ಜನತೆಗೆ ನೀಡಬೇಕು. ಜೂನ್ ಅಂತ್ಯದೊಳಗೆ ಮೊದಲನೇ ಡೋಸ್ ನೀಡಬೇಕು. ಸೆಪ್ಟೆಂಬರ್ ಅಂತ್ಯದೊಳಗೆ ಎರಡನೇ ಡೋಸ್ ನೀಡಿ, ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸಬೇಕು. ಲಸಿಕೆ ಇಲ್ಲದೆ ಜನರು ಸಾಯುವಂಥ ಸ್ಥಿತಿಯನ್ನು ನಿರ್ಮಾಣ ಮಾಡಬಾರದು.

3. ಮನೆಮನೆಗೆ ಲಸಿಕೆ

ಸರ್ಕಾರ ಕೂಡಲೇ ಚುನಾವಣೆ ಸಂದರ್ಭದ ಮತದಾನ ಬೂತ್ ಗಳ ಮಾದರಿಯಲ್ಲಿ ಕೋವಿಡ್ ಲಸಿಕೆ ಬೂತ್ ಸ್ಥಾಪಿಸಬೇಕು. ನೂಕುನುಗ್ಗಲು, ಜನದಟ್ಟಣೆ ಆಗದಂತೆ‌ ಎಲ್ಲ‌ ನಾಗರಿಕರು ಸುಲಭವಾಗಿ ವ್ಯಾಕ್ಸಿನ್ ಪಡೆಯುವಂಥ ಸ್ಥಿತಿ ನಿರ್ಮಾಣ ಮಾಡಬೇಕು.‌ ಸಾಧ್ಯವಾದರೆ ಮನೆಮನೆಗೂ ತೆರಳಿ ಲಸಿಕೆ‌ ನೀಡುವಂಥ ವ್ಯವಸ್ಥೆ ಜಾರಿಗೊಳಿಸಬೇಕು. ಲಸಿಕೆ ನೀಡಿಕೆಗೆ ಸರ್ಕಾರ ನೋಂದಣಿ ಪ್ರಕ್ರಿಯೆಯನ್ನು ಸರಳಗೊಳಿಸಬೇಕು.‌ ಸ್ಮಾರ್ಟ್ ಫೋನ್ ಇಲ್ಲದ,‌ ರಿಜಿಸ್ಟ್ರೇಷನ್ ಮಾಡಿಸಲು ಗೊತ್ತಾಗದ ಹಳ್ಳಿಗಾಡಿನ ಜನರ ಸಮಸ್ಯೆ ನೀಗಿಸಬೇಕು.

4. ತಾರತಮ್ಯವಿಲ್ಲದ ಲಸಿಕೆ

ಒಕ್ಕೂಟ ಸರ್ಕಾರ ಮೊದಲ ಹಂತದ ಲಸಿಕೆ ಹಂಚಿಕೆಗಳಲ್ಲಿ ಗುಜರಾತ್, ಉತ್ತರ ಪ್ರದೇಶ ರಾಜ್ಯಗಳಿಗೆ ಹೆಚ್ಚಿನ ಪ್ರಮಾಣದ ಲಸಿಕೆ ಹಂಚಿಕೆ‌ ಮಾಡಿ, ದಕ್ಷಿಣದ ರಾಜ್ಯಗಳಿಗೆ ಕಡಿಮೆ ಪ್ರಮಾಣದಲ್ಲಿ ಹಂಚಿಕೆ ಮಾಡಿರುವುದು ಅಂಕಿಅಂಶಗಳಲ್ಲಿ ಬಯಲಾಗಿದೆ. ಒಕ್ಕೂಟ ಸರ್ಕಾರ ಆಕ್ಸಿಜನ್, ವೆಂಟಿಲೇಟರ್, ರೆಮ್ಡಿಸಿವಿರ್, ಆಂಫೋಟೆರಿಸಿನ್ ಬಿ ಇತ್ಯಾದಿಗಳ ಹಂಚಿಕೆ ಸಂದರ್ಭದಲ್ಲೂ ಕರ್ನಾಟಕದ ಪಾಲನ್ನು ಕಡಿಮೆ ಮಾಡಿ, ಗುಜರಾತ್ ಮತ್ತು ಉತ್ತರದ ರಾಜ್ಯಗಳಿಗೆ ಹೆಚ್ಚು ನೀಡಿದೆ. ಈ ತಾರತಮ್ಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಜೂನ್ 21 ರಿಂದ ಒಕ್ಕೂಟ ಸರ್ಕಾರ ನೀಡುವ ಲಸಿಕೆಗಳು ವೈಜ್ಞಾನಿಕವಾಗಿ, ಜನಸಂಖ್ಯೆ ಆಧರಿಸಿ ಹಂಚಿಕೆಯಾಗಬೇಕು.

ಈ ಎಲ್ಲ ಹಕ್ಕೊತ್ತಾಯಗಳನ್ನು ಮುಂದಿಟ್ಟು ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲೆಯ ಎಲ್ಲೆಡೆ ಪ್ರತಿಭಟಿಸಿದರು.
ಈ ಸಂದರ್ಭದಲ್ಲಿ ಕೋವಿಡ್ ನಿಯಮಾವಳಿಗಳನ್ನು ಪಾಲನೆ ಮಾಡಿದರು.

ತೇಗೂರುಜಗದೀಶ್.
ಜಿಲ್ಲಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ.
ಚಿಕ್ಕಮಗಳೂರು.

ವರದಿ.
ಮಗ್ಗಲಮಕ್ಕಿಗಣೇಶ್.
ಬ್ಯೂರೋ ನ್ಯೂಸ್.

Navachaitanya Old Age Home

Career | job

About Author