ಹದಿನೇಳು ವರ್ಷಗಳ ಕಾಲ ಸೇವೆ ಸಲ್ಲಿಸಿದ ಶಾಲೆಯಿಂದ ಶಿಕ್ಷಕ ಬೇರೆ ಶಾಲೆಗೆ ವರ್ಗಾವಣೆಯಾದ್ದರಿಂದ ಶಾಲೆಯಿಂದ ತೆರಳುವಾಗ ವಿದ್ಯಾರ್ಥಿಗಳು, ಸಹ ಶಿಕ್ಷಕರು ಹೂಗುಚ್ಚ ಕೊಟ್ಟು ಕಣ್ಣೀರಿಟ್ಟು ಬೀಳ್ಕೊಟ್ಟ ಭಾವುಕ...
Month: June 2023
ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯ (28) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ರಕ್ತಸ್ರಾವದಿಂದ ಸಾವನ್ನಪ್ಪಿದ ಬೆನ್ನಿಗೆ ಅವರ ಹಸುಕೂಸು ಗುರುವಾರ ಮುಂಜಾನೆ ಮೃತಪಟ್ಟಿದೆ....
ಶ್ರೀ ವಿದ್ಯಾ ಭಾರತಿ ವಿದ್ಯಾ ಸಂಸ್ಥೆ( ರಿ ) ಬಣಕಲ್. ನಲ್ಲಿ ಪ್ರತಿವರ್ಷದಂತೆ ಇಂದು ಪೂರ್ವ ಪ್ರಾಥಮಿಕ ಮತ್ತು ಒಂದನೇ ತರಗತಿ ಮಕ್ಕಳಿಗೆ ಶಾಸ್ತ್ರೋಕ್ತ ಅಕ್ಷರಭ್ಯಾಸ ಹಾಗೂ...
ಬಂಟ್ವಾಳ ಪುರಸಭಾ ವ್ಯಾಪ್ತಿಯ ಕಂಚಿಕಾರ್ ಪೇಟೆಯ ಕೂಟೇಲು ಸೇತುವೆ ಸಮೀಪ ನೇತ್ರಾವತಿ ನದಿಯಲ್ಲಿ ಸುಮಾರು (48) ವರ್ಷದ ಅಪರಿಚಿತ ಮಹಿಳೆಯ ಮೃತದೇಹ ಪತ್ತೆಯಾಗಿದೆ. ಪುರಸಭಾ ಸದಸ್ಯ ಮೊಹಮ್ಮದ್...
ಮತಾಂತರ ನಿಷೇಧ ಕಾಯಿದೆಯನ್ನು ವಾಪಾಸ್ಸು ಪಡೆದುಕೊಳ್ಳುತ್ತಿರುವ ಕಾಂಗ್ರೆಸ್ ಮನಸ್ಥಿತಿಯು ಔರಂಗಜೇಬನ ಬಲತ್ಕಾರದ ಮತಾಂತರದ ಮನಸ್ಥಿತಿ ಯಾಗಿದೆ. ಔರಂಗಬೇಜನ ವಿಚಾರವನ್ನು ಜೀವಂತವಾಗಿ ಇಡುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು...
ಸಚಿವ ಈಶ್ವರ್ ಖಂಡ್ರೆ ಕೇಳಿದ ಸಣ್ಣ ಪ್ರಶ್ನೆಗೆ ಶಾಲಾ ಮಕ್ಕಳು ಮಾತ್ರವಲ್ಲ ಶಿಕ್ಷಕರು ಕೂಡ ತಪ್ಪು ಉತ್ತರ ನೀಡಿ ಮುಜುಗರಕ್ಕೀಡಾದ ಘಟನೆ ನಡೆದಿದೆ. ಬೀದರ್ ಜಿಲ್ಲಾ ಉಸ್ತುವಾರಿ...
ನನಗೆ ಬಿಜೆಪಿ ಸೋತದ್ದಕ್ಕೆ ಬೇಜಾರಿಲ್ಲ, ಆದರೆ ಕಾಂಗ್ರೆಸ್ ಬಂದಿದ್ದಕ್ಕೆ ಹೆಚ್ಚು ಬೇಸರ ಎಂದು ಮಾಜಿ ಸಿಎಂ ಡಿ.ವಿ.ಸದಾನಂದಗೌಡ ಹೇಳಿದರು. ಚಾಮರಾಜನಗರದಲ್ಲಿ ವಾಹಿನಿಯೊಂದಿಗೆ ಮಾತನಾಡಿ ಕರ್ನಾಟಕದ ದುರ್ದೈವದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ.ಎಂತೆಂತಾ ಮಂತ್ರಿಗಳಿದ್ದಾರೆ, ಸರ್ವರ್ ಅನ್ನು ಕೇಂದ್ರ ಸರ್ಕಾರ ಹ್ಯಾಕ್ ಮಾಡಿದೆ ಎನ್ನುತ್ತಾರೆ ಎಂದು ಕೈ ವಿರುದ್ಧ ಲೇವಡಿ ಮಾಡಿದರು. ಕುಣಿಯಲಾರದವ ನೆಲ ಡೊಂಕು ಎಂದ ರೀತಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನವರು ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎನ್ನುತ್ತಿದ್ದಾರೆ. ಘೋಷಣೆಗೂ ಮುನ್ನ ಕಾಂಗ್ರೆಸ್ ನವರಿಗೆ ಪರಿಜ್ಞಾನ ಇರಲಿಲ್ಲವಾ??ಮುಂದೆ ಯಾವ ರೀತಿ ತೊಂದರೆ ಉಂಟಾಗಬಹುದು ಎಂಬ ಚಿಂತನೆ ಇರಲಿಲ್ಲವಾ?? 16 ಬಾರಿ ಬಜೆಟ್ ಮಂಡಿಸಿದ್ದಾರೆ ಸಿದ್ದರಾಮಯ್ಯಗೆ ಮುಂದಾಲೋಚನೆ ಇರಬೇಕಿತ್ತು, 16 ಬಾರಿ ಬಜೆಟ್ ಮಂಡಿಸಿದರೇ ಗದ್ದೆಯಲ್ಲಿ ಭತ್ತ ಬೆಳೆಯುವುದಿಲ್ಲ ಎಂದು ಕಿಡಿಕಾರಿದರು. ಅಕ್ಕಿ ಕೊಡದಿರುವ ನೀಚ ಬುದ್ಧಿ ನಮಗಿಲ್ಲ, ಆ ರೀತಿ ಚೀಪ್ ಪಾಲಿಟಿಕ್ಸ್ ನ್ನು ಮುಖಂಡರು,ಕಾರ್ಯಕರ್ತರು ಮಾಡುವುದಿಲ್ಲ,ಕರ್ನಾಟಕದ ಪ್ರತಿಯೊಬ್ಬರಿಗೂ ಅಕ್ಕಿ ಸಿಗಬೇಕೆಂಬುದು ನಾಯಕರ,ಕಾರ್ಯಕರ್ತರ ಆಶಯವಾಗಿದೆ ಎಂದು ಕಾಂಗ್ರೆಸ್ ವಿರುದ್ಧ ಆಕ್ರೋಶ ಹೊರಹಾಕಿದರು. ಸಿಎಂ ಡಿಸಿಎಂಗೆ ಸವಾಲ್ ಹಾಕುವ ನಾಯಕ ನೇಮಕ ವಿಪಕ್ಷ ನಾಯಕನನ್ನು ನೇಮಕ ಮಾಡುವುದು ನಮ್ಮ ಧರ್ಮ.ಅಧಿವೇಶನ ಆರಂಭಗೊಳ್ಳುವ ಮುನ್ನ ವಿಪಕ್ಷ ನಾಯಕನನ್ನು ನೇಮಕ ಮಾಡಲಾಗುವುದು. ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಜುಗಲ್ಬಂದಿಗೆ ಸವಾಲೊಡ್ಡುವ ನಾಯಕನನ್ನು ನೇಮಕ ಮಾಡಲಾಗುವುದು,ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಾಗುವುದು ಎಂದರು. ಇದೇ ವೇಳೆ ಕೆಲವರು ಹೊಂದಾಣಿಕೆ ರಾಜಕಾರಣ ಮಾಡುತ್ತಾರೆ ಎಂಬ ಹೇಳಿಕೆಗಳಿಗೆ ಪ್ರತಿಕ್ರಿಯಿಸಿ,ನಮ್ಮ ಪಕ್ಷದಲ್ಲಿ ಹೊಂದಾಣಿಕೆ ರಾಜಕಾರಣ ಯಾರೂ ಮಾಡುವುದಿಲ್ಲ,ಆ ರೀತಿ ರಾಜಕಾರಣ ಮಾಡಿದ್ದರೇ ಹಲವು ಕ್ಷೇತ್ರಗಳಲ್ಲಿ ಗೆಲ್ಲಬಹುದಿತ್ತು,ಆದರೆ ನಾವು ಸೋತರೂ ಪರವಾಗಿಲ್ಲ,ಹೊಂದಾಣಿಕೆ ರಾಜಕಾರಣ ಮಾಡಲ್ಲ ಎಂಬುದು ಮುಖಂಡರ,ಪಕ್ಷದ ನಿಲುವಾಗಿದೆ ಎಂದರು. ಇನ್ನು,ಸೋಲಿನ ಪರಾಮರ್ಶೆಯ ಕಾರ್ಯಕರ್ತರ ಸಭೆಗೆ ಮಾಜಿ ಸಚಿವ ಸೋಮಣ್ಣ ಗೈರಾಗಿದ್ದರ ಸಂಬಂಧ ಪ್ರತಿಕ್ರಿಯಿಸಿ,ಸೋಮಣ್ಣ ತಾನು ಬರುವುದಿಲ್ಲ ಎಂದು ಹೇಳಿದರು,ಸೋಲಿನ ನೋವಿನಿಂದ ಅವರಿನ್ನೂ ಹೊರಬಂದಿಲ್ಲ,ಆದರೆ ಅವರಿಗೆ ಯಾರಾ ಮೇಲೂ ಕೋಪ ಇಲ್ಲಾ ಎಂದರು.
ಹಾಸನ ಬೇಲೂರು ಹೆದ್ದಾರಿಯಲ್ಲಿ ಸಂಕೇನಹಳ್ಳಿ ಸಮೀಪ ಕಾರು ಮತ್ತು ಮಿನಿ ಕ್ಯಾಂಟರ್ ವಾಹನದ ನಡುವಿನ ಅಪಘಾತದಲ್ಲಿ ವಿದ್ಯಾರ್ಥಿ ಸಾವನ್ನಪ್ಪಿದ ದಾರುಣ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ಮೂಗ್ತಿಹಳ್ಳಿ ಮೂಲದ ಎಂ.ಪಿ....
ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್ ಉದ್ಯೋಗಿ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಗುರುಪುರದಲ್ಲಿ ನಡೆದಿದೆ. ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ...
ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ನೆಕ್ಕರೆಯ ಯುವತಿಯೋರ್ವಳು ಮಂಗಳೂರಿನ ಕುಲಶೇಖರದ ಬಾಡಿಗೆ ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜೂ.19ರಂದು ನಡೆದಿದೆ. ನೆರಿಯ ಗ್ರಾಮದ ನೆಕ್ಕರೆ ನಿವಾಸಿ...