ಕಡೂರು ತಾಲೂಕಿನ ಚೌಳಹಿರಿಯೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಪದಾಧಿಕಾರಿಗಳ ಸೇವಾದೀಕ್ಷಾ ಸಮಾರಂಭ ಜರುಗಿತು.
1 min readಚಿಕ್ಕಮಗಳೂರು ಜಿಲ್ಲೆಯಲ್ಲಿಯೇ ಪ್ರಥಮವಾಗಿ ಕಡೂರು ತಾಲೂಕಿನ ಚೌಳಹಿರಿಯೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕದ ಪದಾಧಿಕಾರಿಗಳ ಸೇವಾದೀಕ್ಷಾ ಸಮಾರಂಭ ಜರುಗಿತು.
ನಂತರ ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ಕಛೇರಿಯನ್ನು ಉದ್ಘಾಟಿಸಲಾಯಿತು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಸೂರಿ ಶ್ರೀನಿವಾಸ್ ಅವರು ವಹಿಸಿದ್ದರು. ಬೆಂಗಳೂರು ಬಿ.ಬಿ.ಎಂ.ಪಿ ಯ ಅಭಿಯಂತರರಾದ ಶ್ರೀಯುತ ತಿಪ್ಪೇಶ್ ಅವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿಯನ್ನು ಕಡೂರು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀಯುತ ಸಿಂಗಟಗೆರೆ ಸಿದ್ಧಪ್ಪ ಅವರು ಬೋಧಿಸಿದರು.
ಚೌಳಹಿರಿಯೂರು ಹೋಬಳಿ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟ ಪೂರ್ವ ಅಧ್ಯಕ್ಷರಾದ ಶ್ರೀಯುತ ಹೆಚ್.ಪಿ.ಮಲ್ಲಿಕಾರ್ಜುನ ಅವರು ಕನ್ನಡದ ಬಾವುಟವನ್ನು ನೂತನ ಹೋಬಳಿ ಅಧ್ಯಕ್ಷರಾದ ಶ್ರೀಯುತ ಹೆಚ್.ಎಸ್. ಬಸವರಾಜ್ ಅವರಿಗೆ ಹಸ್ತಾಂತರಿಸಿದರು.