ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಣಕಲ್ ಸಮೀಪದ ಹೊರಟ್ಟಿ ಗ್ರಾಮದಲ್ಲಿ ಬೆಂಗಳೂರಿನಿಂದ ಉಜಿರೆ ಕಡೆಗೆ ಹೋಗುತ್ತಿದ್ದ ಇನೋವಾ ಕಾರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದ್ದು, ಐದುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.ಇನ್ನೋವದಲ್ಲಿದ್ದ ಐದು ಜನ ಪ್ರಯಾಣಿಕರು ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.