“ಕಮಲ” ಬಿಟ್ಟು “ತೆನೆ” ಹೊತ್ತ ಬಿಜೆಪಿ ಮುಖಂಡರು.”
1 min read
ಹಲವಾರು ವರ್ಷಗಳಿಂದ ಬಿಜೆಪಿ ಪಕ್ಷದಲ್ಲಿ ಇದ್ದ ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ,ಬೆಟ್ಟಗೆರೆ ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಹಾಗೂ ಎಪಿಎಂಸಿ ಸದಸ್ಯರಾದ ಬೆಟ್ಟಗೆರೆ ದಿನೇಶ್ ಮತ್ತು ಬೆಟ್ಟಗೆರೆ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಗ್ರಾಮ ಪಂಚಾಯಿತಿ ಸದಸ್ಯರಾದ ವಸಂತ್ ಮತ್ತು ಬೆಟ್ಟಗೆರೆ ಅಶ್ವಥ್(ಪುಣ್ಣಿ),ಗಿರೀಶ್(ಅಪ್ಪು) ಇವರುಗಳು ಜೆಡಿಎಸ್ ಜಿಲ್ಲಾ ಅಧ್ಯಕ್ಷರಾದ ರಂಜನ್ ಅಜೀತ್ ಕುಮಾರ್,ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾದ ಎಂ.ಪಿ.ಕುಮಾರಸ್ವಾಮಿ ಹಾಗೂ ತಾಲ್ಲೂಕು ಅಧ್ಯಕ್ಷರಾದ ಲಕ್ಷ್ಮಣ ಗೌಡ ಅವರ ನೇತೃತ್ವದಲ್ಲಿ ದಿನಾಂಕ 30/04/2023ರ ಭಾನುವಾರದಂದು ಕೊಟ್ಟಿಗೆಹಾರದ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.