“ಜೆಡಿಎಸ್ ಅಲ್ಪಸಂಖ್ಯಾತ ಘಟಕದಿಂದ ಅಬ್ಬರದ ಪ್ರಚಾರ.”
1 min read
ದಿನಾಂಕ 07/05/2023ರ ಭಾನುವಾರದಂದು ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲ್ಲೂಕಿನ, ಜೆಡಿಎಸ್ ಪಕ್ಷದ ಅಲ್ಪಸಂಖ್ಯಾತ ಘಟಕದಿಂದ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮುಸ್ಲಿಂ ಮುಖಂಡರುಗಳ ಮನೆಗೆ ಭೇಟಿ ನೀಡಿ ದಿನಾಂಕ 10/05/2023ರಂದು ನಡೆಯಲಿರುವ ಮತದಾನದ ಬಗ್ಗೆ ಚರ್ಚೆ ನಡೆಸಿದರು.






ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷವು ಗೆಲ್ಲುವ ಎಲ್ಲ ಸಾಧ್ಯತೆಗಳಿದ್ದು ಹಾಗಾಗಿ ಎಲ್ಲ ಮುಸಲ್ಮಾನ್ ಬಾಂಧವರು ಒಗ್ಗಟ್ಟಾಗಿ ಜೆಡಿಎಸ್ ಪಕ್ಷಕ್ಕೆ ಮತ ನೀಡಿ ಬಹುಮತದಿಂದ ಜೆಡಿಎಸ್ ಪಕ್ಷದ ಅಭ್ಯರ್ಥಿ ಶ್ರೀ ಎಂಪಿ ಕುಮಾರಸ್ವಾಮಿಯವರನ್ನು ಜಯಶೀಲರನ್ನಾಗಿ ಮಾಡಬೇಕು ಎಂದು ಮನವಿ ಮಾಡಿಕೊಂಡರು.

ಈ ಸಂದರ್ಭದಲ್ಲಿ ಮಹಮ್ಮದ್ ಇಮ್ರಾನ್,ಬಿ.ಎ.ಆಸಿಫ್, ಫಲ್ಗುಣಿ ಗ್ರಾಮ ಪಂಚಾಯಿತಿ ಸದಸ್ಯರಾದ ಜಾಬಿರ್ ಹುಸೇನ್,ಬಿ.ಈ.ಯಾಕೂಬ್ ಹಾಗೂ ಜೆಡಿಎಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಜರಿದ್ದರು.

ಈ ಸಂದರ್ಭದಲ್ಲಿ ಬೇರೆ ಬೇರೆ ಪಕ್ಷದ ಕಾರ್ಯಕರ್ತರುಗಳು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.

