“ಮತಗಟ್ಟೆಯಲ್ಲಿ ಮದುಮಗಳು.”
1 min read
ಚಿಕ್ಕಮಗಳೂರು : ಪ್ರಜಾಪ್ರಭುತ್ವದ ಹಬ್ಬ ಕಾಫಿನಾಡಿನಲ್ಲಿ ಜೋರಾಗಿದ್ದು, ಯುವಕರು, ಯುವತಿಯರು, ಮಹಿಳೆಯರು, ಪುರುಷರು ಉತ್ಸಾಹದಿಂದ ಮತಗಟ್ಟೆಗೆ ಆಗಮಿಸಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ.
ದಿನಾಂಕ 10/05/2023ರ ಬುಧವಾರದಂದು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಚಂದ್ರಾಪುರ ಗ್ರಾಮದ ಎಸ್.ಎಂ.ರಾಜು ಅವರ ಮಗಳಾದ ಸುಶ್ಮಿತ ಅವರ ವಿವಾಹವು ಬುಧವಾರ ಮೂಡಿಗೆರೆ ರೈತಭವನದಲ್ಲಿ ಇದ್ದು,ಮದುಮಗಳು ಹಸೆಮಣೆ ಏರುವ ಮೊದಲು ಮಾಕೋನಹಳ್ಳಿಯ ಮತಗಟ್ಟೆಗೆ ಆಗಮಿಸಿ ತಮ್ಮ ಮತವನ್ನು ಚಲಾಯಿಸಿದರು.ನಂತರ ಮದುವೆ ಮಂಟಪಕ್ಕೆ ಆಗಮಿಸಿ ಮತದಾನದ ಮಹತ್ವವನ್ನು ಸಾರಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.


