“ಮೂಡಿಗೆರೆಯಲ್ಲಿ ಕಾಂಗ್ರೆಸ್ ಗೆ ಗೆಲುವು.”
1 min read
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ.
ದಿನಾಂಕ 10/05/2023ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್,ಬಿಜೆಪಿ,ಜೆಡಿಎಸ್,ಬಿ.ಎಸ್.ಪಿ,ಸಿ.ಪಿ.ಐ,ಎಸ್.ಡಿ.ಪಿ.ಐ ಪಕ್ಷದಿಂದ ಹಾಗೂ ಪಕ್ಷೇತರರಾಗಿ ಅಭ್ಯರ್ಥಿಗಳು ಸ್ಪರ್ಧಿಸಿದ್ದರು.
ಇಂದು ನಡೆದ ಚುನಾವಣಾ ಮತ ಎಣಿಕೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷದ ನಡುವೆ ಬಹಳ ಪೈಪೋಟಿ ಇತ್ತು.
ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಮತದಾರ ಪ್ರಭು ಬದಲಾವಣೆ ಬಯಸಿದ್ದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ನಯನ ಮೋಟಮ್ಮ ಅವರು ಗೆಲುವಿನ ಮಾಲೆಗೆ ಕೊರಳೊಡ್ಡಿದ್ದಾರೆ.

ಎರಡನೇ ಸ್ಥಾನದಲ್ಲಿ ಬಿಜೆಪಿ ಅಭ್ಯರ್ಥಿ ದೀಪಕ್ ದೊಡ್ಡಯ್ಯ ಅವರಿದ್ದಾರೆ.

ಮೂರನೇ ಸ್ಥಾನದಲ್ಲಿ ಜೆಡಿಎಸ್ ಪಕ್ಷದ ಅಭ್ಯರ್ಥಿ ಎಂ.ಪಿ.ಕುಮಾರಸ್ವಾಮಿ ಅವರಿದ್ದಾರೆ.ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲುವ ಮೂಲಕ ಬದಲಾವಣೆ ಕಂಡಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.


