“ಘಾಟಿಯಲ್ಲಿ ಗಜರಾಜ ಪ್ರತ್ಯಕ್ಷ,ಆತಂಕದಲ್ಲಿ ಪ್ರಯಾಣಿಕರು.”
1 min read
ಕೊಟ್ಟಿಗೆಹಾರದಿಂದ ಮಂಗಳೂರು ಹೋಗುವ ಮಾರ್ಗ ಮಧ್ಯೆ ಚಾರ್ಮಾಡಿ ಘಾಟಿಯ ಏಳನೇ ತಿರುವಿನಲ್ಲಿ ಬುಧವಾರ ಸಂಜೆ 4:30 ಗಂಟೆ ಸಮಯದಲ್ಲಿ ಒಂಟಿ ಸಲಗ ರಸ್ತೆಯಲ್ಲಿಯೇ ನಿಂತು ಪ್ರಯಾಣಿಕರಿಗೆ ವಾಹನ ಸವಾರರಿಗೆ ಭಯ ಸೃಷ್ಟಿ ಮಾಡಿದೆ.
ಸಂಜೆ ಮಂಗಳೂರು ಹಾಸನ ಸರ್ಕಾರಿ ಬಸ್ ಸಂಚರಿಸುವ ವೇಳೆ ಕೂದಲೆಳೆ ಅಂತರದಲ್ಲಿ ಕಾಡಾನೆಯಿಂದ ಬಸ್ ಪಾರಾಗಿದೆ. ಬಸ್ ಅಣಿ ಅಂತರದಲ್ಲಿ ಕಾಡಾನೆ ಕಂಡು ಚಾಲಕ ಬಸ್ ನಿಲ್ಲಿಸಿದ್ದರಿಂದ ರಸ್ತೆಯಲ್ಲಿ ನಿಂತು ಮರದತ್ತಿರ ವಿಶ್ರಾಂತಿ ಪಡೆಯುತ್ತಿದ್ದ ಕಾಡಾನೆ ಸ್ವಲ್ಪ ಸಮಯದ ನಂತರ ಏಳನೇ ತಿರುವಿನ ಮತ್ತೊಂದು ಭಾಗದಲ್ಲಿ ಹೋಗಿ ನಿಂತಿತು.

ಬಸ್ ನ ಹಿಂದೆ ಹಲವು ವಾಹನಗಳು ಅರ್ಧ ಗಂಟೆಗೂ ಅಧಿಕ ಕಾಲ ಸಾಲುಗಟ್ಟಿ ನಿಂತಿದ್ದು ಒಂದೊಂದೇ ವಾಹನಗಳು ನಿಧಾನವಾಗಿ ಪಾಸ್ ಆದವು. ಕಾಡಾನೆ ನಿಂತು ನೋಡುವ ದೃಶ್ಯ ದ್ವಿಚಕ್ರ ವಾಹನ ಸವಾರರು ಹಾಗೂ ಇನ್ನುಳಿದ ವಾಹನದ ಪ್ರಯಾಣಿಕರಲ್ಲಿ ಭಯ ಹುಟ್ಟಿಸುವಂತಿತ್ತು.
ಬಸ್ ಕಾಡಾನೆಯಿಂದ ತುಸು ದಾಟಿದ ನಂತರ ಪ್ರಯಾಣಿಕರೆಲ್ಲರೂ ನಿಟ್ಟುಸಿರು ಬಿಟ್ಟರು.ಅರಣ್ಯ ಅಧಿಕಾರಿಗಳು ಚಾರ್ಮಾಡಿ ಘಾಟಿನಲ್ಲಿ ರಾತ್ರಿ ಹೊತ್ತು ವಾಹನ ಸಂಚಾರ ನಿರ್ಬಂಧಿಸಿ ಕಾಡಾನೆಯನ್ನು ಸ್ಥಳಾಂತರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಆನೆ ದಾಳಿಗೆ ಅಪಾರ ಬೆಳೆ ನಾಶ:
ಕಾಫಿ, ಅಡಕೆ ತೋಟಕ್ಕೆ ನುಗ್ಗಿದ ಕಾಡಾನೆಯೊಂದು ಬೆಳೆ ನಾಶ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗುತ್ತಿ ಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗುತ್ತಿಹಳ್ಳಿ ಗ್ರಾಮದ ಪ್ರವೀಣ್ ಎಂಬುವರಿಗೆ ಸೇರಿದ್ದ ತೋಟ ನಾಶವಾಗಿದ್ದು, ಸಾಲ ಮಾಡಿ ಬೆಳೆದಿದ್ದ ರೈತ ಕಂಗಾಲಾಗಿದ್ದಾರೆ. ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ರೈತ ಪ್ರವೀಣ್ ಒತ್ತಾಯಿಸಿದ್ದಾರೆ.
ಇನ್ನೂ ಅರಣ್ಯ ಇಲಾಖೆ ಕೂಡಲೇ ಕಾಡಾನೆಯನ್ನು ಸ್ಥಳಾಂತರ ಮಾಡಬೇಕೆಂದು ಗ್ರಾಮಸ್ಥರು ಕೂಡ ಒತ್ತಾಯಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




