“ಅನುದಾನಕ್ಕೆ ಬ್ರೇಕ್, ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ.”
1 min read
ರಾಜ್ಯ ಸರ್ಕಾರದ ವಿರುದ್ದ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟಿಸಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ವಿರುದ್ದ ಧಿಕ್ಕಾರ ಕೂಗಿದ್ದಾರೆ.
ಸಮುದಾಯ ಭವನ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ತಡೆ ಹಿಡಿದ ರಾಜ್ಯ ಸರ್ಕಾರದ ವಿರುದ್ದ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದಾರೆ.
ಚಿಕ್ಕಮಗಳೂರು ತಾಲ್ಲೂಕು ಕಛೇರಿಯಿಂದ ಆಜಾದ್ ಪಾರ್ಕ್ ವೃತ್ತದವರೆಗೂ ನೂರಾರು ಬಿಜೆಪಿ ಕಾರ್ಯಕರ್ತರು ಸೇರಿ ಪ್ರತಿಭಟನಾ ಮೆರವಣಿಗೆ ಮಾಡಿದ್ದು,ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






