“ಸಿಗದ ಉದ್ಯೋಗ, ಆತ್ಮಹತ್ಯೆಗೆ ಶರಣು.”
1 min read
ಕುಂದಾಪುರ: ಸ್ನಾತಕೋತ್ತರ ಪದವಿ ಮುಗಿದರೂ ಉದ್ಯೋಗ ಸಿಗದ ಕಾರಣ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಯುವತಿಯೊಬ್ಬಳು ಸಾವಿಗೆ ಶರಣಾದ ಘಟನೆ ಕಾಲ್ತೋಡು ಗ್ರಾಮದ ಸೀಗೇಡಿ ಎಂಬಲ್ಲಿ ನಡೆದಿದೆ.
ಮೃತರನ್ನು ಸೀಗೇಡಿ ನಿವಾಸಿ ಪ್ರಮೋದ ಶೆಟ್ಟಿ ಎಂಬವರ ಮಗಳು ಗೌತಮಿ (22) ಎಂದು ಗುರುತಿಸಲಾಗಿದೆ. ಉಡುಪಿಯ ಖಾಸಗಿ ಕಾಲೇಜಿನಲ್ಲಿ ಎಂಕಾಂ ಮುಗಿಸಿ ಬ್ಯಾಂಕ್ ನೇಮಕಾತಿ ಪರೀಕ್ಷೆ ಹಾಗೂ ಇತರೆ ಕಂಪನಿ ನೇಮಕಾತಿಗೆ ಪರೀಕ್ಷೆ ಬರೆದಿದ್ದರೂ ಇವರಿಗೆ ಕೆಲಸ ಸಿಕ್ಕಿರಲಿಲ್ಲ ಎನ್ನಲಾಗಿದೆ.
ಇದೇ ಚಿಂತೆಯಲ್ಲಿ ಡೆತ್ ನೋಟ್ ಬರೆದಿಟ್ಟು ಮನೆಯ ಮೊದಲ ಮಹಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.






