लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ಕೇಂದ್ರದ ಅವ್ಯವಸ್ಥೆಯ ವಿರುದ್ಧ ಡಯಾಲಿಸಿಸ್ ರೋಗಿಗಳು ಇಂದು ದಿಢೀರ್ ಪ್ರತಿಭಟನೆ ಮಾಡಿದರು.

ಡಯಾಲೀಸಿಸ್ ಕೇಂದ್ರವನ್ನು ಗುತ್ತಿಗೆ ಪಡೆದಿರುವ ಎಸ್ಕಗ್ ಸಂಜೀವಿನಿ ಸಂಸ್ಥೆಯ ನಿರ್ವಹಣೆ ಕಳಪೆಯಾಗಿದ್ದು, ವ್ಯವಸ್ಥಿತವಾಗಿ ಯಾವುದೂ ನಡೆಯುತ್ತಿಲ್ಲ. ಈ ಸಂಸ್ಥೆಗೆ ಜಿಲ್ಲಾಸ್ಪತ್ರೆಯವರು ಕೇಂದ್ರವನ್ನು ಬಿಟ್ಟು ಕೊಡುವಾಗ ಒಟ್ಟು 14 ಡಯಾಲಿಸಿಸ್ ಯಂತ್ರಗಳಿದ್ದವು. ಅವುಗಳ ಪೈಕಿ ಪ್ರಸ್ತುತ ಏಳು ಯಂತ್ರಗಳು ಮಾತ್ರ ಕಾರ್ಯನಿರ್ವಹಿಸುತ್ತಿವೆ. ಉಳಿದವು ಹಾಳಾಗಿದ್ದು, ಅದನ್ನು ದುರಸ್ತಿ ಕೂಡ ಮಾಡಿಲ್ಲ. ಕೇಂದ್ರದ ಅವ್ಯವಸ್ಥೆಯಿಂದ ಕಳೆದ ಒಂದು ವರ್ಷಗಳಲ್ಲಿ 30 ರೋಗಿಗಳು ಮೃತಪಟ್ಟಿದ್ದಾರೆ ಎಂದು ಧರಣಿ ನಿರತರು ಗಂಭೀರ ಆರೋಪ ಮಾಡಿದರು.

ಈಗ ಈ ಕೇಂದ್ರದಲ್ಲಿ ಒಟ್ಟು 60 ರೋಗಿಗಳು ಡಯಾಲೀಸಿಸ್ ಮಾಡುತ್ತಿದ್ದಾರೆ. ಈ ಎಲ್ಲ ಅವ್ಯವಸ್ಥೆಯನ್ನು ಸರಿಪಡಿಸುವಂತೆ ಆಗ್ರಹಿಸಿ ರೋಗಿಗಳು ಜಿಲ್ಲಾ ಸರ್ಜನ್, ಜಿಲ್ಲಾಧಿಕಾರಿ, ಶಾಸಕರುಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಡಯಾಲಿಸಿಸ್ ಗೆ ಸಂಬಂಧಿಸಿ ತುಂಬಾ ಸಮಸ್ಯೆ ಇದೆ. ಸರಿಯಾಗಿ ಕ್ಲೀನ್ ಆಗುತ್ತಿಲ್ಲ. ಡಯಾಲಿಸಿಸ್ ಮಾಡಿದ ನಂತರ ಚಳಿ, ವಾಂತಿ ಆಗುತ್ತದೆ. ನಾವು ಪ್ರಶ್ನೆ ಮಾಡಿದರೆ ನಮಗೆ ಉಡಾಫೆಯಿಂದ ಮಾತನಾಡುತ್ತಾರೆ. ಸಿಬ್ಬಂದಿಗಳಿಲ್ಲದೆ ಸಮಯಕ್ಕೆ ಸರಿಯಾಗಿ ಡಯಾಲಿಸ್ ಆಗುತ್ತಿಲ್ಲ. ಅವರು ಏನು ಮಾಡಿದರೂ ನಾವು ಕೇಳಬೇಕು. ಯಾಕೆಂದರೆ ನಾವು ಉಚಿತವಾಗಿ ಮಾಡುವವರು ಎಂಬ ನಿರ್ಲಕ್ಷತನ ಅವರಲ್ಲಿದೆ. ಆದುದರಿಂದ ಸರಕಾರ ಕೂಡಲೇ ಹೊಸ ಯಂತ್ರ ಅಳವಡಿಸಿ ಸರಿಯಾದ ವ್ಯವಸ್ಥೆ ಮಾಡಿಕೊಡಬೇಕು ಧರಣಿನಿರತರು ಆಗ್ರಹಿಸಿದರು.

ಉಡುಪಿ ಜಿಲ್ಲಾಸ್ಪತ್ರೆಯ ಡಯಾಲಿಸಿಸ್ ರೋಗಿಗಳ ಧರಣಿಯ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಡಯಾಲೀಸ್ ಕೇಂದ್ರವನ್ನು ಪರಿಶೀಲನೆ ನಡೆಸಿದರು. ಬಳಿಕ ಈ ಸಂಬಂಧ ಶಾಸಕರು ಜಿಲ್ಲಾ ಸರ್ಜನ್ ಡಾ.ಸುದೇಶ್ ಕುಮಾರ್ ಅವರೊಂದಿಗೆ ಮಾತುಕತೆ ನಡೆಸಿದರು. ಧರಣಿನಿರತ ರೋಗಿಗಳನ್ನು ಸಂತೈಸಿದ ಅವರು, ಇಲ್ಲಿನ ಸಮಸ್ಯೆಯನ್ನು ಕೂಡಲೇ ಬಗೆಹರಿಸುವುದಾಗಿ ಭರವಸೆ ನೀಡಿದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯುರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *