“ಮೃತದೇಹ ಪತ್ತೆ.”
1 min read
ಪ್ರಸಿದ್ಧ ಪ್ರವಾಸಿ ತಾಣವಾದ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ದೇವರು ಮನೆ ಗುಡ್ಡದ ವ್ಯಾಪ್ತಿಯಲ್ಲಿ ಯುವಕನ ಶವ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಚಾರಣಕ್ಕೆ ಹೆಸರುವಾಸಿಯಾಗಿರುವ ಸ್ಥಳವಾದ ದೇವರು ಮನೆ ಗುಡ್ಡದ ಸಮೀಪದ ರಸ್ತೆ ತಿರುವಿನಲ್ಲಿ, ಕೊಳೆತ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದ್ದು ಗುರುತು ಸಿಗದ ಸ್ಥಿತಿಯಲ್ಲಿ ಶವ ದೊರಕಿದೆ. ಯುವಕರನ್ನು ಕೊಲೆ ಮಾಡಿ ಈ ಸ್ಥಳಕ್ಕೆ ತಂದು ಎಸೆದಿರುವ ಶಂಕೆ ವ್ಯಕ್ತವಾಗಿದ್ದು ಶವವನ್ನು ನೋಡಿದ ಪ್ರವಾಸಿಗರು ಪೊಲೀಸರಿಗೆ ಈ ಸಂಬಂಧ ಮಾಹಿತಿ ನೀಡಿದ್ದು, ಘಟನಾ ಸ್ಥಳಕ್ಕೆ ಮೂಡಿಗೆರೆ ತಾಲೂಕಿನ ಬಣಕಲ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.



ದಟ್ಟವಾದ ಅರಣ್ಯ ಪ್ರದೇಶವನ್ನು ಹೊಂದಿರುವ ಚಾರ್ಮಾಡಿ ಘಾಟ್ ನ ಸುತ್ತಮುತ್ತಲಿನ ನಿರ್ಜನ ಪ್ರದೇಶಗಳಲ್ಲಿ ಈ ಹಿಂದೆಯೂ ಹಲವಾರು ವ್ಯಕ್ತಿಗಳ ಮೃತದೇಹಗಳು ಪತ್ತೆಯಾಗಿದ್ದವು. ಘಟನಾ ಸಂಬಂಧ ಪರಿಶೀಲನೆ ಆರಂಭಿಸಿರುವ ಪೊಲೀಸರು ಹೆಚ್ಚಿನ ಮಾಹಿತಿಯನ್ನು ಕಲೆಹಾಕಲು ಪ್ರಾರಂಭಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.









