“ಸತ್ತು ಬದುಕಿ ಮತ್ತೆ ಸತ್ತ ವೃದ್ಧ.”
1 min read
ಜೂನ್ 2ರಂದು ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ್ದ ಭೀಕರ ರೈಲು ಅಪಘಾತದಲ್ಲಿ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯ ಕಳಸದಿಂದ ಜಾರ್ಖಂಡ್ ನ ಸಮೇದ್ ಶಿಖರ್ಜಿಗೆ ತೆರಳಿದ್ದ 110 ಜನರು ಪಾರಾಗಿ ಬಂದಿದ್ದರು. ಆದರೆ ದುರಂತವೆಂಬಂತೆ ಅಪಘಾತದಲ್ಲಿ ಬದುಕುಳಿದಿದ್ದ ಚಿಕ್ಕಮಗಳೂರು ಮೂಲದ ವ್ಯಕ್ತಿ ಪ್ರಯಾಣದ ನಡುವೆಯೇ ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ವರದಿಯಾಗಿದೆ. ಕಳಸ ತಾಲೂಕಿನ ಕಳಕೋಡು ನಿವಾಸಿ ಧರ್ಮಪಾಲಯ್ಯ(61) ಮೃತ ವ್ಯಕ್ತಿ. ರೈಲು ಅಪಘಾತವಾದ ಬಳಿಕ ಯಾತ್ರಿಕರೆಲ್ಲರೂ ಜಾರ್ಖಂಡ್’ನ ಸಮೇದ್ ಶಿಖರ್ಜಿಗೆ ತೆರಳಿದ್ದರು. ಇದೀಗ ಅಲ್ಲಿಂದ ಹಿಂದಿರುಗುವಾಗ ಹೃದಯಾಘಾತ ಸಂಭವಿಸಿ ಧರ್ಮಪಾಲಯ್ಯ ಉತ್ತರ ಪ್ರದೇಶದ ಮಿರ್ಜಾಪುರ ರೈಲ್ವೇ ಸ್ಟೆಷನ್ ನಲ್ಲಿ ಸಾವನ್ನಪ್ಪಿದ್ದಾರೆ. ಇದೀಗ ಮಿರ್ಜಾಪುರ ಸರ್ಕಾರಿ ಆಸ್ಪತ್ರೆ ಬಳಿ ಸಹ ಯಾತ್ರಿಕರು ಮೃತ ದೇಹಕ್ಕಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







