“ಜೀರ್ಣ ಅಷ್ಟಬಂಧ ಬ್ರಹ್ಮ ಕುಂಬಾಭಿಷೇಕ ಸಂಪನ್ನ.”
1 min read
ಚಿಕ್ಕಮಗಳೂರು ಜಿಲ್ಲೆಯ,ಕಳಸ ತಾಲ್ಲೂಕಿನ,ಶ್ರಿ ಕಳಸೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜೀರ್ಣ ಅಷ್ಟಬಂಧ ಬ್ರಹ್ಮ ಕುಂಬಾಭಿಷೇಕ ನಡೆಯಿತು.ಈ ಸಂದರ್ಭದಲ್ಲಿ ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಭರವಸೆಯ ಶಾಸಕಿ ನಯನ ಮೋಟಮ್ಮ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಪಾಲ್ಗೊಂಡರು.
ಈ ಸಂದರ್ಭದಲ್ಲಿ ಕಳಸೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದಲ್ಲಿ ಹೊರನಾಡು ಶ್ರೀ ಆದಿಶಕ್ತ್ಯಾತ್ಮಕ ಅನ್ನಪೂರ್ಣೇಶ್ವರಿ ದೇವಸ್ಥಾನದ ಧರ್ಮದರ್ಶಿಗಳಾದ ಭೀಮೇಶ್ವರ ಜೋಷಿ ಹಾಗೂ ಕಳಸೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಮತ್ತು ಅರ್ಚಕರು, ಸಾವಿರಾರು ಜನ ಭಕ್ತಾದಿಗಳು ಹಾಜರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.







