“ಮಾದಕ ವಸ್ತು ಮಾರಾಟ;ಆರೋಪಿಗಳ ಬಂಧನ.”
1 min read
ಮಂಗಳೂರು: ಜೂನ್ 9 2023 ಮಾದಕ ವಸ್ತು ಎಂಡಿಎಂಎಯನ್ನು ಕಾರಿನಲ್ಲಿಟ್ಟು ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಬಂಟ್ವಾಳ ಫರಂಗಿಪೇಟೆ ನಿವಾಸಿ ಮಹಮ್ಮದ್ ಆಶ್ರಫ್ ಯಾನೆ ಚೋಟಾ ಆಶ್ರಫ್, ಪೆರ್ಮನ್ನೂರು ದಾರಂದಬಾಗಿಲು ನಿವಾಸಿ ದಾವೂದ್ ಫರ್ವೇಝ್(36) ಎಂದು ತಿಳಿದು ಬಂದಿದೆ.

ಈ ಕುರಿತು ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಘಟಕದ ಎಸಿಪಿ & ಹೆಗಡೆ ರವರ ನೇತೃತ್ವದ ತಂಡ ಬೆಂಗಳೂರಿನಿಂದ ನಿಷೇಧಿತ ಮಾದಕ ವಸ್ತು ಎಂಡಿಎಂಎಯನ್ನು ಕಾರಿನಲ್ಲಿಟ್ಟು ಮಂಗಳೂರಿಗೆ ತಂದು ನಗರದ ನೆಹರೂ ಮೈದಾನ ಪರಿಸರದಲ್ಲಿ ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಬಂಧಿಸಿದೆ.

ಇವರಿಂದ ಒಟ್ಟು 55.5 ಗ್ರಾಂ ತೂಕದ 2,77,500 ರೂಪಾಯಿ ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮೊಬೈಲ್ ಫೋನ್ ಗಳು 2, ನಗದು ರೂಪಾಯಿ 3230 ಹಾಗೂ ಸಿಲ್ವರ್ ಬಣ್ಣದ ಮಾರುತಿ ಬೆಲೆನೊ ಕಾರು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.. ಈ ಕುರಿತು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಕಾರ್ಯಚರಣೆಯಲ್ಲಿ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್‌ಐ ಸುದೀಪ್ ಎಂ ವಿ ಹಾಗೂ ಸಿಸಿಬಿ ಸಿಬ್ಬಂದಿ ಪಾಲ್ಗೊಂಡಿದ್ದರು ಎಂದು ತಿಳಿದು ಬಂದಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








