“ಖಾಸಗಿ ಬಸ್ – ಕಾಂಕ್ರಿಟ್ ಮಿಕ್ಷಿಂಗ್ ಲಾರಿ ನಡುವೆ ಅಪಘಾತ : ಹಲವರಿಗೆ ಗಾಯ.”
1 min read
ದಿನಾಂಕ 11/06/2023ರ ಸೋಮವಾರದಂದು ಖಾಸಗಿ ಬಸ್ ಮತ್ತು ಕಾಂಕ್ರಿಟ್ ಮಿಕ್ಷಿಂಗ್ ವಾಹನದ ನಡುವೆ ಇಂದು ಮುಂಜಾನೆ ರಾಷ್ಟ್ರೀಯ ಹೆದ್ದಾರಿ 66ರ ಪಾವಂಜೆ ದೇವಸ್ಥಾನದ ಬಳಿ ಅಪಘಾತ ನಡೆದಿದೆ.
ಘಟನೆಯಿಂದ ಬಸ್ ನಲ್ಲಿದ್ದ ಕೆಲ ಪ್ರಯಾಣಿಕರು ಮತ್ತು ಕಾಂಕ್ರಿಟ್ ಮಿಕ್ಸಿಂಗ್ ಲಾರಿಯ ಚಾಲಕನಿಗೆ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ಬಸ್ ಮತ್ತು ಕಾಂಕ್ರಿಟ್ ಮಿಕ್ಸಿಂಗ್ ಲಾರಿಯು ಮಂಗಳೂರು ಕಡೆ ತೆರಳುತ್ತಿತ್ತು ಎನ್ನಲಾಗಿದೆ ಬಸ್ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಸಂಚರಿಸುತ್ತಿದ್ದ ಲಾರಿಗೆ ಡಿಕ್ಕಿ ಹೊಡೆಯಿತೆನ್ನಲಾಗಿದೆ.
ಬಸ್ ಡಿಕ್ಕಿಹೊಡೆದ ರಭಸಕ್ಕೆ ಲಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಗುಚಿ ಬಿದ್ದಿದ್ದು, ರಸ್ತೆ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ಸದ್ಯ ಹೆದ್ದಾರಿಯಲ್ಲಿ ಏಕಮುಖ ಸಂಚಾರ ಸ್ಥಗಿತ ಗೊಳಿಸಿ ದ್ವಿಮುಖ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








