“ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಬಸ್.”
1 min read
ದಿನಾಂಕ 11/06/2023ರ ಸೋಮವಾರದಂದು ಚಾಲಕನ ನಿಯಂತ್ರಣ ತಪ್ಪಿ ಬಸ್ಸೊಂದು ಚರಂಡಿಗೆ ಉರುಳಿದ ಘಟನೆ ರಾ.ಹೆ.75 ರ ತುಂಬೆಯಲ್ಲಿ ನಡೆದಿದೆ.
ಬಿ.ಸಿ.ರೋಡು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಬದಿಯ ಚರಂಡಿಗೆ ಉರುಳಿದೆ.ಬಸ್ ಚರಂಡಿಗೆ ಉರುಳಿದ ಪರಿಣಾಮ ಪ್ರಯಾಣಿಕರಿಗೆ ಅಲ್ಪ ಸ್ವಲ್ಪ ಗಾಯಗಳಾಗಿದ್ದು, ಬೇರೆ ವಾಹನಗಳಲ್ಲಿ ಪ್ರಯಾಣ ಮುಂದುವರಿಸಿದ್ದಾರೆ.ಇನ್ನು ಮಳೆಯ ಕಾರಣಕ್ಕೆ ಹೆದ್ದಾರಿ ಬದಿಯಲ್ಲಿ ಮಣ್ಣು ಸಡಿಲಗೊಂಡಿದ್ದು, ಚಕ್ರಗಳು ಜಾರಿ ಚರಂಡಿಗೆ ಹೋಗಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








