“ಬಸ್ – ಬೈಕ್ ಅಪಘಾತ ; ಓರ್ವ ಸ್ಥಳದಲ್ಲೇ ಸಾವು.”
1 min read
ದಿನಾಂಕ 11/06/2023ರ ಭಾನುವಾರದಂದು ಬೆಳಿಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಪೂರ್ವ ಭಾಗದ ಸರ್ವಿಸ್ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಓರ್ವ ಸಾವಿಗೀಡಾದ ಘಟನೆ ನಡೆದಿದೆ. ಬಸ್ ಮತ್ತು ಬೈಕ್ ನಡುವೆ ಅಪಘಾತ ನಡೆದಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತ ಪಟ್ಟಿದ್ದು ಸಾರ್ವಜನಿಕರ ಸಹಕಾರದಿಂದ ಆಸ್ಪತ್ರೆಗೆ ಸಾಗಿಸಲಾಗಿದೆ.

ಮೃತರನ್ನು ಕಟಪಾಡಿ ಸರಕಾರಿ ಗುಡ್ಡೆ ನಿವಾಸಿ ಇಕ್ಬಾಲ್ (32) ಎಂದು ಗುರುತಿಸಲಾಗಿದೆ. ಇವರು ಮಲ್ಲಿಗೆ ಹೂವಿನ ವ್ಯಾಪಾರವನ್ನು ಮಾಡುತ್ತಿದ್ದರು. ಬಸ್ ಉಡುಪಿಯಿಂದ ಮಂಗಳೂರು ಕಡೆ ಹೋಗುತ್ತಿತ್ತು ಎನ್ನಲಾಗಿದೆ. ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಹೆಚ್ಚಿನ ವಿವರ ಲಭ್ಯವಾಗಬೇಕಿದೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








