“ಸಿಡಿಲಿಗೆ ವ್ಯಕ್ತಿ ಬಲಿ.”
1 min read
ಸಿಡಿಲು ಬಡಿದು ಓರ್ವ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿಪುರದಲ್ಲಿ ನಡೆದಿದೆ.
ದೇವಸ್ಥಾನಕ್ಕೆ ಆಗಮಿಸಿದ್ದ ತರೀಕೆರೆ ತಾಲೂಕಿನ ಬಾವಿಕೆರೆಯ ಗಂಜೀಗೆರೆ ಮೂಲದ ಮುಖೇಶ್ (40) ಎನ್ನುವ ವ್ಯಕ್ತಿ ಮೃತ ದುರ್ದೈವಿ. ದೇವಸ್ಥಾನದ ಹೊರಾಂಗಣದಲ್ಲಿ ನಿಂತಿದ್ದಾಗ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ ನಾಲ್ವರಿಗೂ ಸಣ್ಣಪುಟ್ಟ ಗಾಯಗಳಾಗಿವೆ.
ನಾಲ್ವರು ಗಾಯಳುಗಳಿಗೆ ಕಡೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ವೈದ್ಯರು ವಾಪಸ್ಸು ಕಳುಹಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.








