लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಅಲೆಮಾರಿ ಜನಾಂಗಕ್ಕೆ ಪ್ರತ್ಯೇಕ ಮಂಡಳಿ : ಸಿ.ಎಸ್.ದ್ವಾರಕನಾಥ್ ಆಯೋಗ ಮನವಿ.”

1 min read

ಅಲೆಮಾರಿ ಜನಾಂಗಕ್ಕೆ ಸೇರಿದ 93 ಸಮುದಾಯಗಳ ಜನರಿಗೆ ಸರಿಯಾಗಿ ಗುರುತು ಇಲ್ಲವಾಗಿದ್ದು, ಸರ್ಕಾರ ಇವರ ಸಮಸ್ಯೆ ಬಗೆಹರಿಸಿ ಅವರ ರಕ್ಷಣೆಗೆ ಪ್ರತ್ಯೇಕ ಮಂಡಳಿ ರಚಿಸುವಂತೆ ರಾಜ್ಯ ಹಿಂದುಳಿದ ವರ್ಗಗಳ ಮಾಜಿ ಅಧ್ಯಕ್ಷ ಡಾ.ಸಿ.ಎಸ್.ದ್ವಾರಕನಾಥ್ ಅವರ ನೇತೃತ್ವದ ಅಲೆಮಾರಿ ಸಮುದಾಯದ ಮುಖಂಡರ ನಿಯೋಗವು ಡಿ.ಸಿ.ಎಂ. ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದೆ.

ಕುಮಾರ ಕೃಪ ಅತಿಥಿ ಗೃಹದಲ್ಲಿ ಅಲೆಮಾರಿ ಸಮುದಾಯದ ಮುಖಂಡರ ಜತೆ ಡಿಸಿಎಂ ಶಿವಕುಮಾರ್ ಅವರನ್ನು ಭೇಟಿ ಮಾಡಿದ ದ್ವಾರಕನಾಥ್ ಅವರು ಈ ಸಮುದಾಯಗಳ ಸಮಸ್ಯೆ ಹಾಗೂ ಮೀಸಲಾತಿ ಸೇರಿದಂತೆ ವಿವಿಧ ಬೇಡಿಕೆಗಳ ಕುರಿತು ಚರ್ಚೆ ಮಾಡಿದರು.

ಕಳೆದ ಚುನಾವಣೆಯಲ್ಲಿ ಎಲ್ಲರೂ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಅವರ ರಕ್ಷಣೆಗೆ ಸರ್ಕಾರ ನಿಲ್ಲಬೇಕು ಎಂದು ಮನವಿ ಮಾಡಿದರು. ಈ ವಿಚಾರವಾಗಿ ಸಮಾಜ ಕಲ್ಯಾಣ ಸಚಿವರಾದ ಮಹಾದೇವಪ್ಪ ಅವರನ್ನ ಭೇಟಿ ಮಾಡುವಂತೆ ಡಿ.ಸಿ.ಎಂ.ಸೂಚಿಸಿದರು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *