लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಗಂಗಾವತಿ ಶಾಸಕ, ಮಾಜಿ ಸಚಿವ ಜನಾರ್ಧನ ರೆಡ್ಡಿ ಕುಟುಂಬ ಸಮೇತರಾಗಿ ಶೃಂಗೇರಿಗೆ ಬೇಟಿ ನೀಡಿ ವಿದ್ಯಾ ಅಧಿದೇವತೆ ತಾಯಿ ಶಾರದಾಂಬೆಯ ದರ್ಶನವನ್ನು ಪಡೆದರು.

ಜನಾರ್ಧನ ರೆಡ್ಡಿಯ ಮೊಮ್ಮಗಳು ಬ್ರಮರಳ ಹುಟ್ಟು ಹಬ್ಬದ ದಿನದ ಅಂಗವಾಗಿ ಅಕ್ಷರಾಭ್ಯಾಸ ಮಾಡಿಸಿ, ಶಾರದಾ ಪೀಠದ ಉಭಯ ಜಗದ್ಗುರುಗಳ ಆಶೀರ್ವಾದ ಪಡೆದುಕೊಂಡರು.

ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಶೃಂಗೇರಿಯ ನರಸಿಂಹವನದಲ್ಲಿ ಸನ್ನಿಧಾನ ಶ್ರೀ ಶ್ರೀ ಜಗದ್ಗುರು ವಿಧುಶೇಖರ ಭಾರತಿಗಳ ದರ್ಶನ ಪಡೆದು, ಹಲವಾರು ವಿಚಾರಗಳನ್ನು ಚರ್ಚಿಸಿ ಆಶೀರ್ವಾದ ಪಡೆದಿದ್ದು ನನ್ನ ಪೂರ್ವಜನ್ಮದ ಪುಣ್ಯವೆಂದೇ ಭಾವಿಸಿದ್ದೇನೆ. ಶೃಂಗೇರಿ ಪೀಠದ ಆಡಳಿತಾಧಿಕಾರಿಗಳಾದ ಪದ್ಮಶ್ರೀ ಗೌರಿ ಶಂಕರ್ ಅವರನ್ನು ಈ ಸಂದರ್ಭದಲ್ಲಿ ನೆನೆಯುತ್ತಿದ್ದೇನೆ. ಶೃಂಗೇರಿ ಮಠದ ಬಳ್ಳಾರಿ ಶಾಖೆಯ ಮಠಾಧಿಕಾರಿ ಶ್ರೀ ಬಿ.ಕೆ.ಬಿ.ಎನ್.ಮೂರ್ತಿ ಹಾಗೂ ಶ್ರೀ ಮೋಹನ್ ಶಾಸ್ತ್ರಿ ಅವರ ಸಹಕಾರಕ್ಕಾಗಿ ಈ ಸಂದರ್ಭದಲ್ಲಿ ಧನ್ಯವಾದಗಳನ್ನು ತಿಳಿಸುತ್ತಿದ್ದೇನೆ ಎಂದರು.

ಜನಾರ್ಧನ ರೆಡ್ಡಿ ಅವರ ಆಸ್ತಿ ಜಪ್ತಿಗೆ ಆದೇಶ ನೀಡಿದ ಕೋರ್ಟ್:
ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಶಾಸಕ ಜನಾರ್ಧನ ರೆಡ್ಡಿ ಮತ್ತು ಪತ್ನಿ ಲಕ್ಷ್ಮೀ ಅರುಣಾ ರೆಡ್ಡಿಗೆ ಸೇರಿದ ಆಸ್ತಿ ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಜನಾರ್ಧನ ರೆಡ್ಡಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಕೇಸ್ ಮುಗಿಯುವವರೆಗೆ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಸಿಬಿಐ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ. ಜನಾರ್ಧನ ರೆಡ್ಡಿ ದಂಪತಿಗೆ ಸೇರಿದ ಒಟ್ಟು 124 ಆಸ್ತಿಗಳ ಜಪ್ತಿ ಕೋರಿ ಸಿಬಿಐ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಇದೀಗ ನ್ಯಾಯಾಲಯ ಭ್ರಷ್ಟಾಚಾರ ತಡೆ ಕಾಯ್ದೆ, ಕ್ರಿಮಿನಲ್ ಲಾ ತಿದ್ದುಪಡಿ ಕಾಯ್ದೆಯಡಿಯಲ್ಲಿ ಒಟ್ಟು 77 ಆಸ್ತಿಗಳನ್ನು ಜಪ್ತಿ ಮಾಡುವಂತೆ ಆದೇಶ ಹೊರಡಿಸಿದೆ.

ಈ ಹಿಂದೆ ಕೂಡ 2023 ರ ಜನವರಿ 12 ರಂದು ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಕರ್ನಾಟಕ ಗೃಹ ಇಲಾಖೆ ಅನುಮತಿ ನೀಡಿ ಆದೇಶ ಹೊರಡಿಸಿತ್ತು. ಹೈಕೋರ್ಟ್ ಚಾಟಿ ಬೀಸಿದ ಬಳಿಕ ಎಚ್ಚೆತ್ತುಕೊಂಡಿದ್ದ ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ ಜನವರಿ 12 ರಂದು ಜನಾರ್ಧನ ರೆಡ್ಡಿ ಆಸ್ತಿ ಜಪ್ತಿಗೆ ಪ್ರತಿಕ್ರಿಯೆಗೆ ಅನುಮತಿ ನೀಡಿತ್ತು.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *