लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಚಾರ್ಮಾಡಿ ಘಾಟ್ ನಲ್ಲಿ ಪ್ರವಾಸಿಗರ ಮೋಜು- ಮಸ್ತಿ: ವಾಹನ, ಆಂಬುಲೆನ್ಸ್ ಸವಾರರು ಕಂಗಾಲು.”

1 min read

ಚಾರ್ಮಾಡಿ ಘಾಟಿಯಲ್ಲಿ ವಾಹನ ಸವಾರರ ಅವಾಂತರಗಳಿಂದಾಗಿ ವಾಹನಗಳು ಸಾಲುಗಟ್ಟಿ ನಿಲ್ಲುತ್ತಿದ್ದು ತುರ್ತು ಕಾರ್ಯನಿಮಿತ್ತ ಸಂಚರಿಸುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಚಾರ್ಮಾಡಿ ಘಾಟ್ ನಲ್ಲಿ ಸಂಚರಿಸುವ ಪ್ರವಾಸಿಗರು ಎಲ್ಲೆಂದರಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಿ ಯು ಟರ್ನ್ ಗಳಲ್ಲಿ ಫೋಟೊ, ಸೆಲ್ಪಿ ತೆಗೆದುಕೊಳ್ಳುತ್ತಿದ್ದು, ಇದರಿಂದಾಗಿ ಹೆದ್ದಾರಿ ಬ್ಲಾಕ್ ಆಗುತ್ತಿದೆ ಎಂದು ಆರೋಪಿಸಿದ್ದಾರೆ.

ಜೊತೆಗೆ ಮಳೆಗಾಲವಾಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಎಲ್ಲೆಂದರಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಮೋಜು- ಮಸ್ತಿ ಮಾಡುತ್ತಿದ್ದಾರೆ. ಇದರಿಂದಾಗಿ ಆಂಬುಲೆನ್ಸ್ ಗಳು ರೋಗಿಗಳನ್ನು ಸಮಯಕ್ಕೆ ಸರಿಯಾಗಿ ಕರೆದೊಯ್ಯಲಾಗದೇ ರಸ್ತೆ ಮಧ್ಯೆ ನಿಲ್ಲುವಂತಾಗಿದೆ. ಇದರಿಂದಾಗಿ ರೋಗಿಗಳು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ.

ತಕ್ಷಣ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡು ಪ್ರವಾಸಿಗರ ಇಂತಹಾ ಆಟಾಟೋಪಗಳಿಗೆ ಬ್ರೇಕ್ ಹಾಕಿ ಸಾರ್ವಜನಿಕರ ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಬೇಕೆಂದು ವಾಹನ ಸವಾರರು ಆಗ್ರಹಿಸಿದ್ದಾರೆ.

ಬರಹ ಕೃಪೆ.

ಶಾಹಿನ್ ಅತ್ತಾಜೆ.

ಬಂಗಾಡಿ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *