“ರಾಜ್ಯ ಕಾಂಗ್ರೆಸ್ ಸರ್ಕಾರ ವಿರುದ್ಧ ದ.ಕ. ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ.”
1 min read
ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ನೇತೃತ್ವದಲ್ಲಿ ಸಿದ್ದರಾಮಯ್ಯ ಅವರ ಸರ್ಕಾರ ವಚನ ಭ್ರಷ್ಟ, ಹಿಂದೂ ವಿರೋಧಿ ಮತ್ತು ಜನ ವಿರೋಧಿ ನೀತಿಗಳನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಮಂಗಳೂರು ತಾಲೂಕು ಕಚೇರಿಯ ಮುಂಭಾಗದಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ಭರತ್ ಶೆಟ್ಟಿ ವೈ., ಶಾಸಕರಾದ ವೇದವ್ಯಾಸ ಕಾಮತ್, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮೇಯರ್ ಜಯಾನಂದ ಅಂಚನ್, ಮಾಜಿ ಎಂ.ಎಲ್.ಸಿ ಮೋನಪ್ಪ ಭಂಡಾರಿ,ಪಕ್ಷದ ಮುಖಂಡರು,ಚುನಾಯಿತ ಜನಪ್ರತಿನಿಧಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











