“ಬೈಕಿಗೆ ಬಸ್ ಡಿಕ್ಕಿ : ಯುವಕ ಮೃತ್ಯು.”
1 min read
ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಬ್ಯಾಂಕ್ ಉದ್ಯೋಗಿ ಯುವಕನೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಗುರುಪುರದಲ್ಲಿ ನಡೆದಿದೆ.
ಮೃತರನ್ನು ಪೊಳಲಿ ಕರಿಯಂಗಳ ನಿವಾಸಿ ದಿ.ಅಣ್ಣಿ ಪೂಜಾರಿ ಎಂಬುವವರ ಪುತ್ರ ಸಂತೋಷ್ (38) ಎಂದು ಗುರುತಿಸಲಾಗಿದೆ.ವಾಮಂಜೂರಿನ ಸಹಕಾರಿ ಬ್ಯಾಂಕ್ ಒಂದರಲ್ಲಿ ಉದ್ಯೋಗಿಯಾಗಿದ್ದ ಸಂತೋಷ್, ದಿನಾಂಕ 22/06/2023ರ ಗುರುವಾರದಂದು ಬೆಳಗ್ಗೆ ಮನೆಯಿಂದ ಎಂದಿನಂತೆ ಬೈಕಿನಲ್ಲಿ ಬ್ಯಾಂಕಿಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.
ಬ್ಯಾಂಕ್ ಸಮೀಪದ ರಸ್ತೆಯ ಹಂಪ್ಸ್ ಬಳಿ ಬೈಕ್ ವೇಗ ಕಡಿಮೆಗೊಳಿಸಿದಾಗ ಮೂಡುಬಿದಿರೆಯಿಂದ ಮಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.ಇದರಿಂದ ರಸ್ತೆಗೆ ಎಸೆಯಲ್ಪಟ್ಟ ಸಂತೋಷ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು.ಆದರೆ ಚಿಕಿತ್ಸೆ ಫಲಿಸದೆ ಅವರು ಕೊನೆಯುಸಿರೆಳೆದರು.ಈ ಬಗ್ಗೆ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬರಹ ಕೃಪೆ.
ಶಾಹಿನ್ ಅತ್ತಾಜೆ.
ಬಂಗಾಡಿ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











