“ಡ್ರೈವಿಂಗ್ ಸ್ಕೂಲ್ ಮಾಲಕ ಸಾವು.”
1 min read
ದಕ್ಷಿಣ ಕನ್ನಡ ಜಿಲ್ಲೆಯ,ಬೆಳ್ತಂಗಡಿ ತಾಲ್ಲೂಕಿನ,ಕಲ್ಮಂಜ ಗ್ರಾಮದ ನಿವಾಸಿ, ಉಜಿರೆಯಲ್ಲಿ ಶ್ರೀ ಮಂಜುನಾಥ ಮೋಟಾರು ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದ ಬಾಲಕೃಷ್ಣ ಶೆಣೈ (56) ಅವರಿಗೆ ದಿನಾಂಕ ಜುಲೈ 3ರಂದು ಮಧ್ಯಾಹ್ನ ಹೃದಯಾಘಾತವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ.ಮಧ್ಯಾಹ್ನ ಊಟದ ಬಳಿಕ ಉಜಿರೆಯ ತನ್ನ ಕಚೇರಿಯಲ್ಲಿದ್ದ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಕೂಡಲೇ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ .20 ವರ್ಷಗಳ ಹಿಂದೆ ಉಜಿರೆಯಲ್ಲಿ ಮೊದಲ ಡ್ರೈವಿಂಗ್ ಸ್ಕೂಲ್ ಆರಂಭಿಸಿದ ಅವರು ಕಿಟ್ಟು ಎಂದೇ ಪರಿಚಿತರಾಗಿದ್ದರು. ಸಾವಿರಾರು ಮಂದಿಗೆ ಚಾಲನ ತರಬೇತಿ ನೀಡಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.









