“ಕಾರು ಅಪಘಾತ.”
1 min read
ಚಾಲಕನ ನಿಯಂತ್ರಣ ಕಳೆದುಕೊಂಡ ಪರಿಣಾಮ ಕಾರೊಂದು ಡಿವೈಡರ್ ಮೇಲೆ ಹತ್ತಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾದ ಘಟನೆಯ ದಕ್ಷಿಣ ಕನ್ನಡ ಜಿಲ್ಲೆಯ ತುಂಬೆ ಎಂಬಲ್ಲಿ ನಡೆದಿದೆ.
ಬೆಳ್ತಂಗಡಿ ನಿವಾಸಿ ನವಾಜ್ ಎಂಬುವವರು ಕಾರಿನಲ್ಲಿ ಮಂಗಳೂರು ಕಡೆಗೆ ಹೋಗುತ್ತಿದ್ದ ವೇಳೆ ತುಂಬೆಯಲ್ಲಿ ಈ ಘಟನೆ ನಡೆದಿದೆ. ಕಾರು ಡಿವೈಡರ್ ಮೇಲೆ ಹತ್ತಿದ್ದಲ್ಲದೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರಿನ ಒಂದು ಭಾಗ ನಜ್ಜುಗುಜ್ಜಾಗಿದೆ. ಆದರೆ ಚಾಲಕ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.











