“ಭೀಕರ ಅಪಘಾತ.”
1 min read
ದ್ವಿಚಕ್ರ ವಾಹನಕ್ಕೆ ಪಿಕಪ್ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟು, ಮಹಿಳೆ ಗಂಭೀರ ಗಾಯಗೊಂಡ ಘಟನೆ ಬೆಳ್ತಂಗಡಿ ತಾಲ್ಲೂಕಿನ ಬಂದಾರು-ಕುಪ್ಪೆಟ್ಟಿ ರಸ್ತೆ ಬನಾರಿ ಎಂಬಲ್ಲಿ ದಿನಾಂಕ 09/07/2023ರ ಭಾನುವಾರದಂದು ಸಂಜೆ ನಡೆದಿದೆ.
ಮೃತರನ್ನು ಶುಂಠಿಪಲಿಕೆ ನಿವಾಸಿ ಅಬುಬಕ್ಕರ್ ಎಂದು ಗುರುತಿಸಲಾಗಿದೆ. ಮೃತರ ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.