“ನಿಧನ ವಾರ್ತೆ.”
1 min read
ಬೆಳ್ತಂಗಡಿ ನಗರದ ಮೂರು ಮಾರ್ಗದ ಬಳಿ ಇರುವ ಗಣೇಶ್ ಹೋಟೆಲ್ ಮಾಲೀಕ ದಿವಾಕರ್ ಪ್ರಭು ( 57) ದಿನಾಂಕ 10/07/2023ರ ಭಾನುವಾರದಂದು ನಿಧನರಾಗಿದ್ದಾರೆ.
ಕಳೆದ ಒಂದು ವಾರಗಳ ಹಿಂದೆ ಕುಸಿದು ಬಿದ್ದು ಕೋಮ ಸ್ಥಿತಿಯಲ್ಲಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೇ ಇದ್ದುದರಿಂದ ಬದುಕುವುದಿಲ್ಲ ಎಂದು ವೈದ್ಯರು ಕೈಬಿಟ್ಟಿದ್ದರು. ಜು.08ರಂದು ಅವರನ್ನು ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅದರೆ ಜುಲೈ 10ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ಕಳೆದ ಹಲವಾರೂ ವರ್ಷಗಳಿಂದ ಬೆಳ್ತಂಗಡಿ ನಗರದ ಮೂರು ಮಾರ್ಗದ ಬಳಿ ಹೋಟೆಲ್ ಉದ್ಯಮವನ್ನು ನಡೆಸುತಿದ್ದ ಇವರು ಎಲ್ಲರೊಂದಿಗೆ ಆತ್ಮೀಯತೆಯಿಂದ ಬೆರೆಯುತ್ತಿದ್ದರು.ಇವರ ಆತ್ಮಕ್ಕೆ ಶಾಂತಿ ಸಿಗಲಿ.
ಬರಹ ಕೃಪೆ.
ಶಾಹಿನ್.ಉಜಿರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.