लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿನಾಂಕ 19/07/2023ರ ಬುಧವಾರ (ಇಂದು) ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ,ದಾರದಹಳ್ಳಿ ಗ್ರಾಮದ ಹೊಸಪುರ ಸೇತುವೆಯಲ್ಲಿ ಸುಮಾರು 5 ದಿವಸದಿಂದ ಕಾಣೆಯಾಗಿದ್ದ 61ವರ್ಷ ವಯಸ್ಸಿನ ದೇವಮ್ಮ ಎಂಬ ವೃದ್ಧೆಯ ಮೃತದೇಹವು ಪತ್ತೆಯಾಗಿದ್ದು ಇದನ್ನು ಮೂಡಿಗೆರೆಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆಯ ಅಧ್ಯಕ್ಷರಾದ ಫಿಶ್ ಮೊನು ಗೌರವಾಧ್ಯಕ್ಷರಾದ ಅಬ್ದುಲ್ ರಹಿಮಾನ್ ಉಪಾಧ್ಯಕ್ಷರಾದ ರಹೀಮ್ ಮೆಡಿಕಲ್ ಮತ್ತು ಮೂಡಿಗೆರೆಯ ಪೊಲೀಸ್ ಠಾಣಾಧಿಕಾರಿ ಆದರ್ಶ್ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ವರ್ಗದವರು ಮತ್ತು ಮೂಡಿಗೆರೆಯ ತಹಶೀಲ್ದಾರ್ ಸಮ್ಮುಖದಲ್ಲಿ ಈ ಮೃತ ದೇಹವನ್ನು ಹಳ್ಳದಿಂದ ಮೇಲಕ್ಕೆತ್ತಿ ಮರಣೋತ್ತರ ಪರೀಕ್ಷೆಗೆ ಮೂಡಿಗೆರೆಯ ಎಂಜಿಎಂ ಆಸ್ಪತ್ರೆಗೆ ರವಾನಿಸಲಾಯಿತು.

ವೃದ್ಧೆ ದೇವಮ್ಮ ಸುಮಾರು ಐದು ದಿನಗಳ ಹಿಂದೆ ಭತ್ತದ ಗದ್ದೆಗೆ ಹೋಗಿ ಬರುವುದಾಗಿ ಹೇಳಿ ತೆರಳಿದ್ದರು ಎನ್ನಲಾಗಿದ್ದು, ರಭಸದಿಂದ ಹರಿಯುತ್ತಿದ್ದ ಹೇಮಾವತಿ ನದಿಯನ್ನು ದಾಟುವ ವೇಳೆಯಲ್ಲಿ ಕಾಲು ಜಾರಿ ನೀರಿನಲ್ಲಿ ಮುಳುಗಿ ಮೃತಪಟ್ಟಿರಬಹುದೆಂಬ ಶಂಕೆ ವ್ಯಕ್ತಪಡಿಸಿದ್ದಾರೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *