“..ಸನ್ಮಾನ..”
1 min read
(ದಿನಾಂಕ 30-07-2023) ಇಂದು ಶಿವಮೊಗ್ಗ ಜಿಲ್ಲೆಯ, ಸಾಗರದ ಒಕ್ಕಲಿಗರ ಸಮುದಾಯ ಭವನದಲ್ಲಿ ಸಾಗರ ತಾಲ್ಲೂಕು ಒಕ್ಕಲಿಗರ ಸಂಘ ಇವರ ಆಶ್ರಯದಲ್ಲಿ ನಡೆದ ಶಾಸಕರಿಗೆ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಸಾಗರ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರು ಉದ್ಘಾಟಿಸಿ ಮಾತನಾಡಿದ ಅವರು ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ಅವರನ್ನು ಗೌರವಿಸುವ ಮೂಲಕ ಅವರ ಮುಂದಿನ ಗುರಿಯನ್ನು ತಲುಪುವಂತೆ ಪ್ರೋತ್ಸಾಹಿಸುವ ಕೆಲಸ ಮಾಡುತ್ತಿರುವುದು ಖುಷಿಯ ವಿಷಯ ಎಂದರು.

ಈ ಸಂಸಂದರ್ಭದಲ್ಲಿ ಮಾನ್ಯ ಶಾಸಕರು ಎಸ್. ಎಸ್. ಎಲ್. ಸಿ. ಹಾಗೂ ಪಿ.ಯು.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಒಕ್ಕಲಿಗ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಿದರು.


ಈ ಕಾರ್ಯಕ್ರಮದಲ್ಲಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.