“ಕಾಫಿ ತೋಟದಲ್ಲಿ ಕಾಡಾನೆ ದಾಳಿ : ಗಿಡನಾಶ”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಬಡವನದಿಣ್ಣೆ ಪ್ರದೇಶದ ಸುತ್ತಮುತ್ತಲಿನ ಕಾಫಿ ತೋಟದಲ್ಲಿ ಕಾಡಾನೆಗಳು ಬೀಡು ಬಿಟ್ಟಿದ್ದು, ಕಾಫಿ, ಅಡಕೆ, ಕಾಳು ಮೆಣಸು ಗಿಡಗಳನ್ನು ನಾಶಪಡಿಸುತ್ತಿದೆ. ಇದರಿಂದ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುವಂತಾಗಿದೆ.
ಬಡವನದಿಣ್ಣೆ ಗ್ರಾಮದ ಬಿ.ಆರ್.ಶಿವಕುಮಾರ್ ಎಂಬುವರ ತೋಟದಲ್ಲಿ ಗುರುವಾರ ರಾತ್ರಿ ಕಾಡಾನೆಗಳು ದಾಳಿ ನಡೆಸಿ ನೂರಾರು ಕಾಫಿ, ಕಾಳುಮೆಣಸು, ಅಡಕೆ ಗಿಡಗಳನ್ನು ನಾಶಪಡಿಸಿವೆ. ಅರಣ್ಯ ಸಿಬ್ಬಂದಿ ಸ್ಥಳಕ್ಕೆ ತೆರಳಿ ಕಾಡಾನೆ ಓಡಿಸಲು ಪ್ರಯತ್ನ ನಡೆಸಿದ್ದಾರೆ. ಕಳೆದ ಎರಡು ದಿನ ಹಿಂದೆ ತಾಲ್ಲೂಕಿನ ಗೋಣಿಬೀಡು ಸಮೀಪದ ಜಿ.ಹೊಸಳ್ಳಿ ಗ್ರಾಮದಲ್ಲಿರುವ ಟಾಟಾ ಎಸ್ಟೇಟ್ ನಲ್ಲಿ 16 ಕಾಡಾನೆಗಳು ಬೀಡು ಬಿಟ್ಟಿದ್ದವು.
ಊರುಬಗೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಅನೇಕ ತೋಟಗಳಲ್ಲಿ ಕಾಡಾನೆ ದಾಳಿ ಮಾಡಿ ಬೆಳೆ ನಾಶಪಡಿಸಿವೆ. ಇದರಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಲ್ಲದೇ ಕೂಲಿ ಕಾರ್ಮಿಕರು ತೋಟದ ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಅರಣ್ಯ ಇಲಾಖೆ ಕಾಡಾನೆ ಬಂದೊಡೊನೆ ಓಡಿಸುವುದರಲ್ಲೇ ಸಮಯ ವ್ಯರ್ಥ ಮಾಡುತ್ತಿದ್ದಾರೆ.
ಹಾಗಾಗಿ ಕಾಡಾನೆಗಳಿಂದ ಶಾಶ್ವತ ಪರಿಹಾರಕ್ಕೆ ಅರಣ್ಯ ಇಲಾಖೆ ಕ್ರಮ ವಹಿಸಬೇಕೆಂದು ಬೆಳೆಗಾರರು ಆಗ್ರಹಿಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.