“ಅಪರಿಚಿತ ವ್ಯಕ್ತಿಯ ಶವ ಪತ್ತೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಲೋಕವಳ್ಳಿ ಎಸ್ಟೇಟ್ನ ಕಾಫಿ ತೋಟವೊಂದರಲ್ಲಿ ಶುಕ್ರವಾರ ಬೆಳಗ್ಗೆ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಶುಕ್ರವಾರ ಬೆಳಗ್ಗೆ ತೋಟದಲ್ಲಿ ಕಾರ್ಮಿಕರು ಅಡಿಕೆ ಗಿಡಗಳಿಗೆ ಔಷಧಿ ಸಿಂಪಡಣೆ ಮಾಡುವ ಸಂದರ್ಭದಲ್ಲಿ ದುರ್ವಾಸನೆ ಬೀರುತ್ತಿದ್ದರಿಂದ ಏನಿರಬಹುದೆಂದು ಹುಡುಕಾಟ ನಡೆಸಿದ್ದಾರೆ.
ಆಗ ಭೂಮಿಗೆ ಮುಖಮಾಡಿಕೊಂಡು ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿಗೆ ಸುಮಾರು 45 ವರ್ಷ ಪ್ರಾಯವಾಗಿದ್ದು, ಸುಮಾರು ಏಳೆಂಟು ದಿನದ ಹಿಂದೆ ಸಾವನ್ನಪ್ಪಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವ್ಯಕ್ತಿಯ ಗುರುತು ಪತ್ತೆಗಾಗಿ ತನಿಖೆ ಕೈಗೊಂಡಿದ್ದಾರೆ. ಘಟನೆ ಕುರಿತು ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.