“ವಿದ್ಯುತ್ ಶಾಕ್ ತಗುಲಿ ವ್ಯಕ್ತಿ ಸಾವು.”
1 min read
ಮರದ ಕೊಂಬೆ ಕತ್ತರಿಸುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ 56 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹುಯಿಲುಮನೆ ಗ್ರಾಮದಲ್ಲಿ ನಡೆದಿದೆ.
ಲೋಕಪ್ಪ ಗೌಡ (56) ವಿದ್ಯುತ್ ಆಘಾತದಿಂದ ಮೃತಪಟ್ಟವರಾಗಿದ್ದಾರೆ. ಮರ ಏರಿ ಕೊಂಬೆಗಳನ್ನು ಕತ್ತರಿಸುತ್ತಿದ್ದ ವೇಳೆ ವಿದ್ಯುತ್ ತಂತಿ ತಗಲಿದ್ದು, ವಿದ್ಯುತ್ ನ ತೀವ್ರತೆಗೆ ಮರದಲ್ಲೇ ಪ್ರಾಣ ಬಿಟ್ಟಿದ್ದು, ಮೃತದೇಹ ಮರದಲ್ಲೇ ನೇತಾಡುತ್ತಿರುವ ದೃಶ್ಯ ಬೆಚ್ಚಿಬೀಳಿಸಿದೆ.


ಘಟನಾ ಸ್ಥಳಕ್ಕೆ ಬಾಳೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಈ ಸಂದರ್ಭದಲ್ಲಿ ಅಂಬುಲೆನ್ಸ್ ಚಾಲಕ ಮತ್ತು ಸಾಮಾಜಿಕ ಕಾರ್ಯಕರ್ತ ಮುಹಮ್ಮದ್ ಆರಿಫ್ ಬಣಕಲ್ ಹಾಗೂ ಸಾರ್ವಜನಿಕರು ಹಾಜರಿದ್ದರು.
ಈ ಭಾಗದಲ್ಲಿ ವಿದ್ಯುತ್ ಸ್ಪರ್ಶದಿಂದ ಹಲವರು ಪ್ರಾಣ ಕಳೆದುಕೊಂಡಿದ್ದಾರೆ ಎಂಬ ಆಕ್ರೋಶ ಕೂಡ ಕೇಳಿ ಬಂದಿದೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.