“ಚೆಸ್ ಸ್ಪರ್ಧೆಯಲ್ಲಿ ತಾಲ್ಲೂಕಿಗೆ ಪ್ರಥಮ.”
1 min read
ನಳಂದ ಆಂಗ್ಲ ಮಾಧ್ಯಮ ಪ್ರೌಢಶಾಲೆ- ಮೂಡಿಗೆರೆಯ 9ನೇ ತರಗತಿಯ ವಿದ್ಯಾರ್ಥಿನಿಯಾದ ಬಿ.ಎ.ಸಮನ್ವಿ ಅವರು ದಿನಾಂಕ 09/08/2023ರ ಬುಧವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ ಎಲೈಟ್ ಮೈಂಡ್ಸ್ ಶಾಲೆ ಚಿನ್ನಿಗ-ಜನ್ನಾಪುರದಲ್ಲಿ ನಡೆದ ತಾಲ್ಲೂಕು ಮಟ್ಟದ ಚೆಸ್ ಸ್ಪರ್ಧೆಯಲ್ಲಿ ಭಾಗವಹಿಸಿ, ಮೂಡಿಗೆರೆ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ನಳಂದ ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯವರು ಮತ್ತು ಶಿಕ್ಷಕ ವೃಂದದವರು ತುಂಬು ಹೃದಯದಿಂದ ಶುಭ ಹಾರೈಸಿದ್ದಾರೆ.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.