“ಕಾಂಗ್ರೆಸ್ ಕಚೇರಿಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ.”
1 min read
ದಿನಾಂಕ 15/08/2023ರ ಮಂಗಳವಾರದಂದು ಚಿಕ್ಕಮಗಳೂರು ಜಿಲ್ಲೆಯ,ಮೂಡಿಗೆರೆ ತಾಲ್ಲೂಕಿನ, ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.ಧ್ವಜಾರೋಹಣವನ್ನು ಭರವಸೆಯ ಶಾಸಕಿ ನಯನ ಮೋಟಮ್ಮ ಅವರು ನೇರವೇರಿಸಿ ಶುಭ ಕೋರಿದರು.

ನಂತರದಲ್ಲಿ ಕಾಂಗ್ರೆಸ್ ಕಚೇರಿಯಲ್ಲಿ ಸಭಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ಈ ಸಂದರ್ಭದಲ್ಲಿ ಮೂಡಿಗೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಜಿ.ಸುರೇಂದ್ರ ಅವರು ಮಾತನಾಡಿ ಸ್ವಾತಂತ್ರ್ಯ ನಮ್ಮೆಲ್ಲರ ಹಕ್ಕು ಇದು ಸುಮ್ಮನೆ ಸಿಕ್ಕಿಲ್ಲ ಹಲವು ವೀರ ಯೋಧರ ಸ್ವಾತಂತ್ರ್ಯ ಸೇನಾನಿಗಳ ತ್ಯಾಗ ಬಲಿದಾನದಿಂದ ಸಿಕ್ಕಿದೆ, ನಮ್ಮ ದೇಶವು ವಿವಿಧತೆಯಲ್ಲಿ ಏಕತೆಯನ್ನು ಕಾಣುವ ಏಕ ಮಾತ್ರ ದೇಶವಾಗಿದೆ ಎಂದರು.ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರುಗಳು,ಹೋಬಳಿ ಅಧ್ಯಕ್ಷರುಗಳು,ಅಲ್ಪ ಸಂಖ್ಯಾತ ಘಟಕ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.