लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
21/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಮಂಗಳೂರು: ಟಿಪ್ಪರ್- ಸ್ಕೂಟರ್ ಡಿಕ್ಕಿ; ವಿದ್ಯಾರ್ಥಿ ಮೃತ್ಯು.”

1 min read

ಟಿಪ್ಪರ್- ಸ್ಕೂಟರ್ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳೂರು ನಗರದ ಹೊರವಲಯದ ಅಡ್ಯಾರ್ ನಲ್ಲಿ ಶನಿವಾರ ನಡೆದಿದೆ.

ಮೃತ ವಿದ್ಯಾರ್ಥಿಯನ್ನು ಅಡ್ಯಾರ್ ಪದವು ನಿವಾಸಿ ಶರಫುದ್ದೀನ್ (16) ಎಂದು ಗುರುತಿಸಲಾಗಿದೆ. ಈತ ನಗರದ ಮಿಲಾಗ್ರಿಸ್ ಶಾಲೆಯ ಹತ್ತನೇ ತರಗತಿ ವಿದ್ಯಾರ್ಥಿಯಾಗಿದ್ದಾನೆ. ಗೆಳೆಯನೊಂದಿಗೆ ಆಕ್ಟಿವಾದಲ್ಲಿ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಹಿಂಬದಿ ಸವಾರನಾಗಿದ್ದ ಶರಫುದ್ದೀನ್ ರಸ್ತೆಗೆಸೆಯಲ್ಪಟ್ಟು ತೀವ್ರ ರಕ್ತಸ್ರಾವವುಂಟಾಗಿದೆ.

ಕೂಡಲೇ ಸ್ಥಳೀಯರು ಶರಫುದ್ದೀನ್ ನನ್ನು ಸಮೀಪದ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಇನ್ನೋರ್ವನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದುಬಂದಿದೆ.

ವರದಿ.

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *