“ಸಾಮೂಹಿಕ ಸತ್ಯನಾರಾಯಣ ಪೂಜೆ.”
1 min read
ಚಿಕ್ಕಮಗಳೂರು ಜಿಲ್ಲೆಯ,ಕೊಪ್ಪ ತಾಲ್ಲೂಕಿನ,ತುಪ್ಪೂರು ಆರೇಕಲ್ಲು ಶ್ರೀ ಭೂತೇಶ್ವರ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ದಿನಾಂಕ 02/09/2023ರ ಶನಿವಾರದಂದು ಸಾಮೂಹಿಕ ಸತ್ಯನಾರಾಯಣ ಪೂಜೆ ವಿಜೃಂಭಣೆಯಿಂದ ನಡೆಯಿತು.

ಇಲ್ಲಿ ವಿಶೇಷವೆಂದರೆ ದೀಪದ ಪೂಜೆ ಮತ್ತು ಸುಗ್ಗಿ ಹಬ್ಬ ಬಹಳ ಅದ್ದೂರಿಯಾಗಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿದೆ.


ಈ ಸಂದರ್ಭದಲ್ಲಿ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಟಿ.ಡಿ.ರಾಜೇಗೌಡ ಅವರು ಆಗಮಿಸಿ ಪೂಜೆಯಲ್ಲಿ ಪಾಲ್ಗೊಂಡರು.
ಈ ಪೂಜೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಪೂಜೆ ಸಲ್ಲಿಸಿದರು.
ವರದಿ.
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.




