लाइव कैलेंडर

November 2026
M T W T F S S
 1
2345678
9101112131415
16171819202122
23242526272829
30  
15/11/2026

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕಳಸ ಪೊಲೀಸ್ ಠಾಣೆಯ ಎ.ಎಸ್.ಐ ಜಿ.ಕೆ.ಮುರುಳಿಧರ್ ಹೃದಯಾಘಾತದಿಂದ ನಿಧನ.”

1 min read

ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸೈ ಜಿ.ಕೆ.ಮುರುಳಿಧರ್ ಭಾನುವಾರ ಬೆಳಗ್ಗಿನ ಜಾವ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ದಿನಾಂಕ 24/09/2023ರ ಭಾನುವಾರದಂದು ಬೆಳಗ್ಗಿನ ಜಾವ ಮುರುಳಿಧರ್ ಅವರಿಗೆ ಎದೆನೋವು ಕಾಣಿಸಿಕೊಂಡಿದ್ದು ತಕ್ಷಣ ಕಳಸದ ಕಾವೇರಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಬಂದ ಕೆಲವೇ ಕ್ಷಣಗಳಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

ಮೂಲತಃ ಬೀರೂರಿನವರಾಗಿದ್ದ ಇವರು ಕಳೆದ ನಾಲ್ಕು ವರ್ಷಗಳಿಂದ ಕಳಸ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಚಿಕ್ಕಮಗಳೂರು ಬಸವನಹಳ್ಳಿ ಠಾಣೆ, ಶೃಂಗೇರಿ, ಕುದುರೆಮುಖ ಠಾಣೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ಕಳೆದ ನಾಲ್ಕು ವರ್ಷಗಳಿಂದ ಕಳಸ ಠಾಣೆಯಲ್ಲಿ ಎ.ಎಸೈ ಆಗಿ ಕಾರ್ಯನಿರ್ವಹಿಸುತ್ತಿದ್ದರು.

ಮುರುಳಿಧರ್ ಅವರ ನಿವೃತ್ತಿಗೆ ಇನ್ನು ಕೇವಲ 11 ತಿಂಗಳು ಬಾಕಿಯಿತ್ತು ಎಂದು ತಿಳಿದುಬಂದಿದೆ. ಇವರು ಪತ್ನಿ ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ದಕ್ಷ ಅಧಿಕಾರಿಯಾಗಿದ್ದ ಮುರುಳಿಧರ್ ಸ್ನೇಹಜೀವಿಯಾಗಿದ್ದರು. ಅವರ ನಿಧನಕ್ಕೆ ಕಳಸ ಠಾಣೆಯ ಠಾಣಾಧಿಕಾರಿ, ಸಿಬ್ಬಂದಿ ವರ್ಗ ಹಾಗೂ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ. ಮುರಳಿಧರ್ ಅವರ ಪಾರ್ಥೀವ ಶರೀರವನ್ನು ಭಾನುವಾರ ಸಂಜೆ ಇಲಾಖೆಯ ಸಕಲ ಗೌರವದೊಂದಿಗೆ ಅಂತ್ಯ ಸಂಸ್ಕಾರ ಮಾಡಲಾಯಿತು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *

You may have missed