“ಚಾರ್ಮಾಡಿ ಘಾಟ್ ನಲ್ಲಿ ಅಪಘಾತ : ಟ್ರಾಫಿಕ್ ಜಾಮ್ ನಲ್ಲಿ ಗಂಟೆಗಟ್ಟಲೆ ಸಿಲುಕಿದ ಪ್ರವಾಸಿಗರು.”
1 min read
ಕಾರು ಮತ್ತು ಗ್ಯಾಸ್ ಲಾರಿ ನಡುವೆ ಅಪಘಾತ ಸಂಭವಿಸಿ ಚಾರ್ಮಾಡಿ ಘಾಟ್ ನಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.
ದಿನಾಂಕ 09/12/2023ರ ಶನಿವಾರದಂದು ಮಂಗಳೂರು ಕಡೆಯಿಂದ ಬರುತ್ತಿದ್ದ ಇಂಡೇನ್ ಕಂಪನಿಯ ಗ್ಯಾಸ್ ಲಾರಿ ಮತ್ತು ಧರ್ಮಸ್ಥಳ ಕಡೆಗೆ ಚಲಿಸುತ್ತಿದ್ದ ಪ್ರವಾಸಿಗರ ಕಾರಿನ ನಡುವೆ ಅಪಘಾತ ಸಂಭವಿಸಿದ್ದು ,ಅಪಘಾತದಲ್ಲಿ ಕಾರಿನ ಇಂಜಿನಿಗೆ ತೀವ್ರ ಹಾನಿಯಾಗಿದ್ದು,ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟಾವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.
ಗಂಟೆಗಟ್ಟಲೆ ಟ್ರಾಫಿಕ್ ಜಾಮ್ : ಪರದಾಡಿದ ಪ್ರಯಾಣಿಕರು.
ಅಪಘಾತದಿಂದಾಗಿ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗಂಟೆಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅಪಘಾತವಾದ ವಾಹನಗಳು ರಸ್ತೆಮಧ್ಯೆದಲ್ಲಿಯೇ ಸಿಲುಕಿಕೊಂಡಿದ್ದರಿಂದ ಚಾರ್ಮಾಡಿ ಮತ್ತು ಕೊಟ್ಟಿಗೆಹಾರ ಕಡೆಯಿಂದ ರಸ್ತೆಯಲ್ಲಿ ಬಂದ ವಾಹನಗಳು ಅತ್ತಿಂದಿತ್ತ ಸಂಚರಿಸಲು ಆಗದೇ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಪ್ರಯಾಣಿಕರು ಪರದಾಡುವಂತಾಯಿತು.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.