AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ನಾಲ್ಕುದಿನದ ಹಿಂದೆ ನಾಪತ್ತೆಯಾಗಿದ್ದ ಯುವತಿ : ಶವವಾಗಿ ಪತ್ತೆ ; ವಿಷಯ ತಿಳಿಯುತ್ತಿದ್ದಂತೆಯೇ ಜಮಾಯಿಸಿದ ಸಾರ್ವಜನಿಕರು.”

1 min read

ನಾಲ್ಕು ದಿನಗಳ ಹಿಂದೆ ಕಾಣೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶವವಾಗಿ ಪತ್ತೆಯಾಗಿದ್ದಾಳೆ.

ಚಿಕ್ಕಮಗಳೂರು ಜಿಲ್ಲೆ,ಮೂಡಿಗೆರೆ ತಾಲ್ಲೂಕಿನ, ಗೋಣಿಬೀಡು ಠಾಣೆ ವ್ಯಾಪ್ತಿಯ,ಜಿ.ಹೊಸಹಳ್ಳಿ ಗ್ರಾಮದ ಸೃಷ್ಟಿ ಎಂಬ ಯುವತಿ ದಿನಾಂಕ 21/12/2023ರ ಗುರುವಾರ ಸಂಜೆಯಿಂದ ಕಾಣೆಯಾಗಿದ್ದಳು.

ಕಾಣೆಯಾಗಿದ್ದ ಯುವತಿಗಾಗಿ ತೀವ್ರ ಹುಡುಕಾಟ ನಡೆಸಲಾಗಿತ್ತು.ದಿನಾಂಕ 24/12/2023ರ ಭಾನುವಾರ ಮುಂಜಾನೆ ಗ್ರಾಮದ ಕುಡಿಯುವ ನೀರು ಯೋಜನೆಯ ಬಾವಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ.

ಜಿ.ಹೊಸಹಳ್ಳಿ ಗ್ರಾಮದ ಕೃಷ್ಣಮೂರ್ತಿ ಎನ್ನುವವರ ಪುತ್ರಿ ಸೃಷ್ಟಿ(19ವರ್ಷ)ಹಾಸನದ ಮಹಿಳಾ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದರು.ಹಾಸ್ಟೆಲ್ ನಿಂದ ಕಾಲೇಜಿಗೆ ಹೋಗುತ್ತಿದ್ದರು.

ಕಳೆದ ವಾರ ಮನೆಗೆ ಬಂದಿದ್ದ ಸೃಷ್ಟಿ ಡಿಸೆಂಬರ್ 21 ರ ಗುರುವಾರ ಸಂಜೆ ಇದ್ದಕ್ಕಿದ್ದಂತೆ ಮನೆಯಿಂದ ನಾಪತ್ತೆಯಾಗಿದ್ದಳು. ಸೃಷ್ಟಿಗಾಗಿ ಸುತ್ತಮುತ್ತಲ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಲಾಗಿತ್ತು ಆದರೆ ಪತ್ತೆಯಾಗಿರಲಿಲ್ಲ.

ಭಾನುವಾರ ಮುಂಜಾನೆ ಗ್ರಾಮದ ಕುಡಿಯುವ ನೀರಿನ ಮೋಟರ್ ಅಳವಡಿಸಿರುವ ಬಾವಿಯಲ್ಲಿ ಯುವತಿಯ ಶವ ತೇಲುತ್ತಿರುವುದನ್ನು ವಾಟರ್ ಮ್ಯಾನ್ ಗಮನಿಸಿ ಮಾಹಿತಿ ನೀಡಿದ್ದಾರೆ.ಗೋಣಿಬೀಡು ಠಾಣೆಯಲ್ಲಿ ದೂರು ದಾಖಲಾಗಿದ್ದು ,ಶವವನ್ನು ಮೂಡಿಗೆರೆಯ ಸಾಮಾಜಿಕ ಸಕ್ರಿಯ ಸೇವಾ ಸಂಸ್ಥೆಯ ಫಿಶ್ ಮೋನು ಹಾಗೂ ಅಬ್ದುಲ್ ರೆಹಮಾನ್ ಮತ್ತು ತಂಡದವರು ಬಾವಿಯಿಂದ ಹೊರತೆಗೆದಿದ್ದಾರೆ‌.ಈ ಸಂದರ್ಭದಲ್ಲಿ ಮೂಡಿಗೆರೆ ವೃತ್ತ ನಿರೀಕ್ಷಕರಾದ ಸೋಮೇಗೌಡ,ಪಿ.ಎಸ್.ಐ.ಆದರ್ಶ್ ಮತ್ತು ಪೋಲಿಸ್ ಸಿಬ್ಬಂದಿಗಳು ಹಾಜರಿದ್ದರು.

ಸೃಷ್ಟಿ ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸೃಷ್ಟಿ ತಂದೆ ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.ಈ  ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *