AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಮದ್ಯಪಾನ ಪ್ರಿಯರ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರಕ್ಕೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಗಳ ಮೂಲಕ ದಿನಾಂಕ 30/12/2023ರ ಶನಿವಾರದಂದು ಮನವಿ ಸಲ್ಲಿಸಲಾಯಿತು.

        ಬೇಡಿಕೆಗಳ ಪ್ರಮುಖ ಪಟ್ಟಿ ಹೀಗಿದೆ.

  1. MRP ಗಿಂತ ಹೆಚ್ಚು ಹಣವನ್ನು ವಸೂಲಿ ಮಾಡಬಾರದು.
  2. ಶುದ್ಧವಾದ ಕುಡಿಯುವ ನೀರು ಒದಗಿಸಬೇಕು.
  3. ಶೌಚಾಲಯವನ್ನು ಸ್ವಚ್ಛವಾಗಿ ಇರಿಸಬೇಕು.
  4. ವಿಮಾ ಸೌಲಭ್ಯ ಒದಗಿಸಬೇಕು.

ಇನ್ನೂ ಅನೇಕ ಬೇಡಿಕೆಗಳನ್ನು ರಾಜ್ಯಾಧ್ಯಕ್ಷರಾದ ವೆಂಕಟೇಶ್ ಗೌಡರ ನೇತೃತ್ವದಲ್ಲಿ ಸಲ್ಲಿಸಿದ್ದು,15 ದಿನಗಳಲ್ಲಿ ಬೇಡಿಕೆಗಳನ್ನು ಈಡೇರಿಸದಿದ್ದರೆ ರಾಜ್ಯಾದ್ಯಂತ ಉಗ್ರವಾದ ಹೋರಾಟವನ್ನು ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು

ಹೋರಾಟದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ರಾಮಸ್ವಾಮಿ,ಹಾಸನ ಜಿಲ್ಲಾಧ್ಯಕ್ಷರಾದ ಶಿವರಾಂ,ಬೇಲೂರು ತಾಲ್ಲೂಕು ಅಧ್ಯಕ್ಷರಾದ ತೋಟೇಶ್ ತಗರೆ,ಅರಸಿಕೆರೆ ತಾಲ್ಲೂಕು ಅಧ್ಯಕ್ಷರಾದ ವಾಸು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *