AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ದಿನಾಂಕ 11/01/2024ರ ಗುರುವಾರದಂದು ಸ್ಥಳೀಯ ಸ್ಕೌಟ್ ಅಂಡ್ ಗೈಡ್ ಸಸ್ಥೆ ಮೂಡಿಗೆರೆ ವತಿಯಿಂದ ಮೂಡಿಗೆರೆ ತಾಲ್ಲೂಕಿನ ಸ್ಕೌಟ್ ಅಂಡ್ ಗೈಡ್ ವಿದ್ಯಾರ್ಥಿಗಳಿಗೆ ಮೂಡಿಗೆರೆ ಆರಕ್ಷಕ ಠಾಣೆಯಲ್ಲಿ ರಸ್ತೆ ಅಪಘಾತ ಜಾಗೃತಿ ಮತ್ತು ಅಪರಾಧಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಇದರಲ್ಲಿ ತಾಲ್ಲೂಕಿನ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿ ಮಾಹಿತಿ ಪಡೆದರು.ಕಾರ್ಯಕ್ರಮದಲ್ಲಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷರಾದ ಹಮೀದ್ ಸಬ್ಬೇನಹಳ್ಳಿ ಹಾಗೂ ತಾಲ್ಲೂಕಿನ ಸ್ಕೌಟ್ ಮಾಸ್ಟರ್ ಚೇತನ್,ರಕ್ಷಿತ್ ಬಾಳೂರು ಮತ್ತು ಗೈಡ್ ಕ್ಯಾಪ್ಟನ್ ಅಶ್ವಿನಿ ಹಾಗೂ ಸರ್ಕಲ್ ಇನ್ಸ್ಪೆಕ್ಟರ್ ಸೋಮೇಗೌಡ ಮತ್ತು ಠಾಣೆಯ ಸಿಬ್ಬಂದಿಗಳು ಹಾಜರಿದ್ದರು.

ಸುಮಾರು 50ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಭಾಗವಹಿಸಿದ್ದು,ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *