“ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಘೋಷಣೆ : ಪ್ರಧಾನಿ ಮೋದಿ ಅಭಿನಂದನೆ.”
1 min read
ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ದೇಶದ ಪರಮೋಚ್ಚ ಗೌರವವಾದ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ.
ಎಲ್.ಕೆ.ಅಡ್ವಾಣಿ ಜೀ ಅವರಿಗೆ ಭಾರತ ರತ್ನ ನೀಡುವ ಬಗ್ಗೆ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ.ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ.ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು.ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಸ್ಮರಣಾರ್ಹ.ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು ಎಂದು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
🎙️ವರದಿ.🎙️
ಮಗ್ಗಲಮಕ್ಕಿ ಗಣೇಶ್.
ಬ್ಯೂರೋ ನ್ಯೂಸ್,ಅವಿನ್ ಟಿವಿ.
9448305990.