AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಕರವೇ ಪ್ರಾನ್ಸಿಸ್ ಡಿಸೋಜ ರವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ.”

1 min read

ನಾಟ್ಯಮಯೂರಿ ನೃತ್ಯ ಶಾಲೆ ಗೋಣಿಕೊಪ್ಪ ಈ ಸಂಸ್ಥೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು,ತುಂಬಾ ಸುಂದರವಾಗಿ ಕಾರ್ಯಕ್ರಮ ಮೂಡಿ ಬಂದಿದೆ.ನೃತ್ಯ ಶಿಕ್ಷಕಿ ಪ್ರೇಮಾಂಜಲಿ ಅವರ ನೇತೃತ್ವದಲ್ಲಿ ಮಕ್ಕಳ ನೃತ್ಯ ಮನಸ್ಸಿಗೆ ತೃಪ್ತಿ ಉಂಟಾಗುವಂತಹ ಕಾರ್ಯಕ್ರಮವಾಗಿ ಮೂಡಿಬಂದಿದೆ.

ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಕೊಡಗು ಜಿಲ್ಲೆಯ,ಸೋಮವಾರಪೇಟೆ ತಾಲ್ಲೂಕಿನ, ಕರ್ನಾಟಕ ರಕ್ಷಣಾ ವೇದಿಕೆಯ ತಾಲ್ಲೂಕು ಅಧ್ಯಕ್ಷರಾದ ಪ್ರಾನ್ಸಿಸ್ ಡಿಸೋಜ ಅವರಿಗೆ ಸುವರ್ಣ ಸಂಭ್ರಮ ಕನ್ನಡಿಗ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಪ್ರಶಸ್ತಿ ಸ್ವೀಕರಿಸಿದ ಪ್ರಾನ್ಸಿಸ್ ಡಿಸೋಜ ಮಾತನಾಡಿ,ಕಾರ್ಯಕ್ರಮವು ಅದ್ಭುತವಾಗಿ ಮೂಡಿಬಂದಿದ್ದು,ಒಬ್ಬ ಕನ್ನಡ ಭಾಷೆಯ ಸೇವಕನಾದ ನನ್ನನ್ನು ಗುರುತಿಸಿ ಗೌರವಿಸಿದ ನಿಮಗೆ ಹೃದಯಪೂರ್ವಕ ಧನ್ಯವಾದಗಳು ಅರ್ಪಿಸುತ್ತೇನೆ ಎಂದರು.ಈ ಕಾರ್ಯಕ್ರಮದಲ್ಲಿ ಕನ್ನಡಾಭಿಮಾನಿಗಳು,ಕಲಾ ಪ್ರೇಮಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *