ಮಹಿಳಾ ದಿನಾಚರಣೆ.
1 min read
ಇಂದು ಮೂಡಿಗೆರೆ ಮಹಿಳಾ ಜೆಸಿ ವತಿಯಿಂದ ಜೆಸಿ ಭವನದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಜೆಸಿ ವಿಭಾಗದ ಅಧ್ಯಕ್ಷರಾದ ದಿವ್ಯ ಸುಪ್ರೀತ್ ಅವರು ವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಮಹಿಳಾ ಸಂಯೋಜಕಿ ಯಾದಂತಹ ಯಶಸ್ವಿನಿ ಮೇಡಂ ರವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಹಾಗೂ ವಲಯ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ರಾಜು ಹಾಗೂ ವಲಯ ಮಹಿಳಾ ಸಂಯೋಜಕಿಯಾದಂತಹ ರೂಪ ಗೋಪಾಲಕೃಷ್ಣ ಹಾಗೂ ಯುರೋ ಕಿಡ್ಸ್ ಶಾಲೆಯ ಮುಖ್ಯಸ್ಥರಾದ ರಶ್ಮಿ ಸುಮನ್ ರವರು ಭಾಗವಹಿಸಿದ್ದರು.
ಈ ಕಾರ್ಯಕ್ರಮದಲ್ಲಿ ತಾಲೂಕಿನಲ್ಲಿ ಸಾಧನೆ ಮಾಡಿದಂತಹ ಮೂರು ಮಹಿಳಾ ಸಾಧಕೀಯರನ್ನು ಗುರುತಿಸಿ ಸನ್ಮಾನಿಸಲಾಯಿತು, ಹಾಗೂ ಮಹಿಳಾ ದಿನಾಚರಣೆಯ ಪ್ರಯುಕ್ತ ನಡೆಸಿದಂತ ಆಟೋಟ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಈ ಕಾರ್ಯಕ್ರಮದಲ್ಲಿ ಮೂಡಿಗೆರೆ ಜೇಸಿ ಅಧ್ಯಕ್ಷರಾದ ಸುಪ್ರೀತ್ ಕಾರ್ಬೈಲ್, ಮಹಿಳಾ ಜೆಸಿ ನಿಕಟ ಪೂರ್ವ ಅಧ್ಯಕ್ಷರಾದ ಕವಿತಾ ಸಂತೋಷ್, ಕಾರ್ಯದರ್ಶಿ ಶ್ರುತಿ ದೀಕ್ಷಿತ್, ಕಾರ್ಯಕ್ರಮದ ನಿರ್ದೇಶಕರಾದ ನಿಶ್ಚಿತ ಯತೀಶ್ ಉಪಸ್ಥಿತರಿದ್ದರು, ಹಾಗೂ ಎಲ್ಲಾ ಮೂಡಿಗೆರೆ ಮಹಿಳಾ ಜೆಸಿ ಪೂರ್ವ ಅಧ್ಯಕ್ಷರುಗಳು ಹಾಗೂ ಎಲ್ಲಾ ಸದಸ್ಯರು ಎಲ್ಲಾ ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮ ಯಶಸ್ಸಿಗೊಳಿಸಿದರು.