लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
23/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್*

1 min read

*ಸರ್ವಧರ್ಮದವರನ್ನು ಸಮಾನರನ್ನಾಗಿ ಕಾಣುವ ಮಾಣಿಕ್ಯ ಪದ್ಮರಾಜ್*

ಇವರು ಸದಾ ಹಸನ್ಮುಖಿ… ಎಲ್ಲರಲ್ಲೂ ನಗುಮುಖದಿಂದಲೇ ಮಾತನಾಡಿಸುತ್ತ ಸಮಸ್ಯೆ ಆಲಿಸುವ ಸರಳ ಸಜ್ಜನಿಕೆಯ ಗುಣಹೊಂದಿದವರು ನೇರ ನಡೆನುಡಿಯ ಧೀಮಂತ ವ್ಯಕ್ತಿತ್ವದ ಪದ್ಮರಾಜ್ ಆರ್. ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶ, ಸಮಾಜಸೇವೆಯನ್ನು ಮೈಗೂಡಿಸಿಕೊಂಡು, ಕುದ್ರೋಳಿ ಗೋಕರ್ಣನಾಥ ದೇವಳದ ಬಗ್ಗೆ ಅಪಾರ ಶ್ರದ್ಧೆ ಭಕ್ತಿ ಹೊಂದಿ ಕಿರಿಯ ವಯಸ್ಸಿನಲ್ಲೇ ದೇವಳದ ಬಹು ದೊಡ್ಡ ಜವಾಬ್ದಾರಿ ವಹಿಸಿಕೊಂಡು ಕ್ಷೇತ್ರದ ಏಳಿಗೆಗಾಗಿ ಸದಾ ಹಗಲಿರುಳು ದುಡಿಯುತ್ತಿರುವವರು.

  • ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಾಳೂರು ಎಂಬ ಪುಟ್ಟ ಗ್ರಾಮದಲ್ಲಿ ಮಂಗಳೂರು ಮೂಲದ ಎಚ್.ಎಂ.ರಾಮಯ್ಯ ಮತ್ತು ಲಲಿತಾ ದಂಪತಿಯ ದ್ವಿತೀಯ ಪುತ್ರನಾಗಿ ಜನಿಸಿದ ಪದ್ಮರಾಜ್ ರಾಮಯ್ಯರವರು ಬಾಲ್ಯದಿಂದಲೇ ಪ್ರತಿಭಾನ್ವಿತ.
    ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಶಿಕ್ಷಣವನ್ನು ಹುಟ್ಟೂರಾದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಗಿಸಿ ಮುಂದೆ ಬಿ.ಎ ಪದವಿಯನ್ನು ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜು ಹಾಗೂ ಕಾನೂನು ಪದವಿಯನ್ನು ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಮುಗಿಸಿದರು. ೧೯೯೫ರಿಂದ ಕಾನೂನು ವೃತ್ತಿಯ ಚೊಚ್ಚಲ ಅಭ್ಯಾಸವನ್ನು ಕೇಂದ್ರದ ಮಾಜಿ ವಿತ್ತ ಸಚಿವ ಜನಾರ್ದನ ಪೂಜಾರಿಯವರೊಂದಿಗೆ ಪ್ರಾರಂಭಿಸುವ ಅವಕಾಶ ದೊರೆತ್ತಿರುವುದು ಇವರ ಭಾಗ್ಯವೇ ಸರಿ.

About Author

Leave a Reply

Your email address will not be published. Required fields are marked *