लाइव कैलेंडर

June 2025
M T W T F S S
 1
2345678
9101112131415
16171819202122
23242526272829
30  
20/06/2025

AVIN TV Latest Breaking News

ಇತ್ತೀಚಿನ ಬಿಸಿ ಬಿಸಿ ಸುದ್ದಿ ಅವಿನ್ ಟಿವಿ ಸುದ್ದಿ ನಿಮ್ಮದು ಪ್ರಸಾರ ನಮ್ಮದು Avin Tv the news is yours the broadcast is ours.

“ಎಸ್ಸೆಸ್ಸೆಲ್ಸಿ ಫಲಿತಾಂಶ ಬಿಡುಗಡೆ : ಹೆದರಿ ನಾಪತ್ತೆಯಾದ ಬಾಲಕ.”

1 min read

ಇಂದು SSLC ಪರೀಕ್ಷೆ ಫಲಿತಾಂಶ ಪ್ರಕಟಗೊಳ್ಳಲಿದೆ ಎನ್ನುವ ಮಾಹಿತಿ ತಿಳಿಯುತ್ತಿದ್ದಂತೆಯೇ ಭಯಗೊಂಡ ವಿದ್ಯಾರ್ಥಿಯೋರ್ವ ನಾಪತ್ತೆಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ,ನೆಲಮಂಗಲ ತಾಲ್ಲೂಕಿನ ಬೆಟ್ಟಹಳ್ಳಿಯಲ್ಲಿ ನಡೆದಿದೆ.

ಮಂಡಿಗೆರೆ ಸರ್ಕಾರಿ ಶಾಲೆ ವಿದ್ಯಾರ್ಥಿ ಚಂದನ್ ಗೌಡ (16) ನಾಪತ್ತೆಯಾಗಿರುವ ವಿದ್ಯಾರ್ಥಿ ಎಂದು ತಿಳಿದು ಬಂದಿದೆ.

ಸುರೇಶ್ ಹಾಗೂ ರೂಪಾ ದಂಪತಿಯ ಮಗ ಚಂದನ್ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದಿದ್ದು, ಪರೀಕ್ಷೆ ಫಲಿತಾಂಶದಲ್ಲಿ ಫೇಲ್ ಆಗುವ ಭೀತಿಯಲ್ಲಿದ್ದ ಎನ್ನಲಾಗಿದೆ.

ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸುದ್ದಿ ತಿಳಿದು ಪರೀಕ್ಷೆಯಲ್ಲಿ ಫೇಲ್ ಆಗುವ ಭೀತಿಯಲ್ಲಿ ನಾಪತ್ತೆಯಾಗಿದ್ದಾನೆ.

ಚಂದನ್ ಗೌಡ ಬೈರನಾಯಕನಹಳ್ಳಿ ರೈಲ್ವೆ ನಿಲ್ದಾಣದ ಬಳಿ ಬೈಕ್ ನಿಲ್ಲಿಸಿ ಕಾಣೆಯಾಗಿದ್ದಾನೆ. ಹೀಗಾಗಿ ಪೋಷಕರು ಆತಂಕದಿಂದ ಮಗನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ, ಘಟನೆ ಸಂಬಂಧ ನೆಲಮಂಗಲ ಠಾಣೆಯಲ್ಲಿ ಪ್ರಕರ‍ಣ ದಾಖಲಾಗಿದೆ.

✍🏻ಬರಹ ಕೃಪೆ.✍🏻

ಸಿದ್ದಿಕ್ ಚಕ್ಕಮಕ್ಕಿ.

🎙️ವರದಿ.🎙️

ಮಗ್ಗಲಮಕ್ಕಿ ಗಣೇಶ್.

ಬ್ಯೂರೋ ನ್ಯೂಸ್,ಅವಿನ್ ಟಿವಿ.

9448305990.

About Author

Leave a Reply

Your email address will not be published. Required fields are marked *