ಕಡೂರಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾಕಾರರಲ್ಲೊಬ್ಬರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
1 min read
ಕಡೂರಿನ ಕನ್ನಡ ಭವನದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾಕಾರರಲ್ಲೊಬ್ಬರಾದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.
ಜ್ಯೋತಿ ಬೆಳಗಿಸುವ ಮೂಲಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಸೂರಿ ಶ್ರೀನಿವಾಸ್ ಅವರು ಉದ್ಘಾಟಿಸಿ ಮಾತನಾಡಿದರು. ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ಸವಿತಾ ಸತ್ಯನಾರಾಯಣ ಅವರು ಪುಷ್ಪ ನಮನ ಸಲ್ಲಿಸಿದರು.ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಅಧ್ಯಕ್ಷರಾದ ಶ್ರೀ ಆರ್.ಜಿ.ಕೃಷ್ಣಸ್ವಾಮಿ ವಿಶೇಷ ಉಪನ್ಯಾಸ ನೀಡಿದರು.ರೋಟರಿ ಕ್ಲಬ್ ನ ಅಧ್ಯಕ್ಷರಾದ ಶ್ರೀ ಕೆ.ಪಿ.ರಾಘವೇಂದ್ರ ಅವರು ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬೀರೂರು ನಗರ ಕಸಾಪ ಘಟಕದ ಅಧ್ಯಕ್ಷರಾದ ಶ್ರೀಮತಿ ಎನ್.ಡಿ.ಸೀತಾಲಕ್ಷ್ಮಿ ಅವರು ಪ್ರಾರ್ಥನೆಯೊಂದಿಗೆ ಪ್ರಾರಂಭವಾಗಿ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿಗಳಾದ ಶ್ರೀ ಬಿ.ಚಂದ್ರಶೇಖರ್ ಅವರು ಸ್ವಾಗತಿಸಿದರೆ, ಇನ್ನೋರ್ವ ಗೌರವ ಕಾರ್ಯದರ್ಶಿಗಳಾದ ಕುಪ್ಪಾಳು ಶಾಂತಮೂರ್ತಿ ಅವರು ಕಾರ್ಯಕ್ರಮ ನಿರೂಪಿಸಿ, ವಂದನಾರ್ಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಸಾಪ ಪದಾಧಿಕಾರಿಗಳಾದ ಕುಮಾರಸ್ವಾಮಿ ಕರುಗಲ್ ಹಟ್ಟಿ, ಇತಿಹಾಸ ಉಪನ್ಯಾಸಕರಾದ ಡಾಕ್ಟರ್ ಮಂಜುನಾಥ್ ಅವರು ಸೇರಿದಂತೆ ಹಲವು ಜನರು ಉಪಸ್ಥಿತರಿದ್ದರು.
[6/4, 9:19 PM] Re: ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿಂಗಟಗೆರೆ ಸಿದ್ಧಪ್ಪನವರು ವಹಿಸಿದ್ದರು.