day, 00 month 0000
00:00:00
ಅವಿನ್ ಟಿವಿ ಕೆಂಬತ್ ಮಕ್ಕಿ ( ಕೆಂಬತ್ಮಕ್ಕಿ ) ಮನೋಜ್ ಸಾರಥ್ಯದಲ್ಲಿ Avin Tv In the Leadership Of Kembathmakki Manoj ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ… – AVIN TV

लाइव कैलेंडर

November 2024
M T W T F S S
 123
45678910
11121314151617
18192021222324
252627282930  

AVIN TV

Latest Online Breaking News

ಪರೀಕ್ಷಾ ಅಕ್ರಮಗಳು…… ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ…

post Hospital Stroke care center www.nisargacare.com rehab bedridden care home Nursing Service , Nisarga care Healthcare Rehabilitation Center | Health Care Unit | Pre & Post Operative Care | Home Nursing | Geriatric Care , www.nisargacare.com NISARGA CARE Stroke & Paralysis Rehabilitation Hospital Nisarga Rehab - Centre For Neurological Rehabilitation mentally retarded neuro and Stroke Rehabilitation in Bangalore Best Rehab care www.nisargacare.com http://www.nisargacare.com , http://www.navachaithanyaoldagehome.com , http://www.avintv.com/9211/

ಪರೀಕ್ಷಾ ಅಕ್ರಮಗಳು……

ಅರ್ಹರನ್ನು ಗುರುತಿಸಲಾರದಷ್ಟು ಭ್ರಷ್ಟಗೊಂಡ ವ್ಯವಸ್ಥೆ……

ಭಾರತ ಈ ಕ್ಷಣದಲ್ಲಿ, ಅಂತರಾಷ್ಟ್ರೀಯ ಮಟ್ಟದಲ್ಲಿ ಸಾಕಷ್ಟು ಮುಂದುವರಿಯುತ್ತಿದೆ, ಬೆಳೆಯುತ್ತಿದೆ, ಅಭಿವೃದ್ಧಿ ಹೊಂದುತ್ತಿದೆ, ವಿಶ್ವಗುರು ಪಟ್ಟಕ್ಕೆ ಮುನ್ನಡೆಯುತ್ತಿದೆ ಎಂದು ಏನೇ ಹೇಳಿದರು ಸಹ ಆಂತರಿಕವಾಗಿ ಶೈಕ್ಷಣಿಕವಾಗಿಯೇ ಆಗಿರಲಿ, ಉದ್ಯೋಗಕ್ಕಾಗಿಯೇ ಆಗಿರಲಿ ಪರೀಕ್ಷೆಗಳನ್ನು ನಡೆಸಿ ಅರ್ಹರನ್ನು ಆಯ್ಕೆ ಮಾಡುವ ಪ್ರಕ್ರಿಯೆ ಸಂಪೂರ್ಣ ವಿಫಲವಾಗಿದೆ ಅಥವಾ ನಿರಾಶದಾಯಕವಾಗಿದೆ ಅಥವಾ ಜನರ ನಂಬಿಕೆ ಕಳೆದುಕೊಂಡು ಅನುಮಾನ ಹುಟ್ಟಿಸುತ್ತಿದೆ ಅಥವಾ ಭ್ರಮನಿರಸನವಾಗಿದೆ…….

ಉದ್ಯೋಗಕ್ಕಾಗಿಯೋ, ಕಾಲೇಜು ಪ್ರವೇಶಕ್ಕಾಗಿಯೋ, ವೃತ್ತಿಪರ ಕೋರ್ಸ್
ಗಳ ಆಯ್ಕೆಗಾಗಿಯೋ ನಡೆಯುವ ಪ್ರತಿ ಪರೀಕ್ಷೆಯಲ್ಲೂ, ಭಿನ್ನ – ಭಿನ್ನವಾಗಿ, ಊಹಿಸಲೂ ಸಾಧ್ಯವಾಗದ ರೀತಿಯಲ್ಲಿ, ಕಲ್ಪಿಸಲು ಅಸಾಧ್ಯವಾದ ರೂಪದಲ್ಲಿ, ದೊಡ್ಡ ಮಟ್ಟದ ಅಧಿಕಾರಿಗಳು, ರಾಜಕಾರಣಿಗಳು, ಅದರ ಫಲಾನುಭವಿಗಳು ಎಲ್ಲರೂ ಸೇರಿ ಬೇರೆ ಬೇರೆ ರೀತಿ ವಂಚಿಸುತ್ತಿದ್ದಾರೆ…….

ಅಧಿಕೃತ ಮಾಹಿತಿಯ ಪ್ರಕಾರ ಕಳೆದು ಎಂಟು ವರ್ಷಗಳಲ್ಲಿ ಇಡೀ ದೇಶದಲ್ಲಿ 50 ಕ್ಕೂ ಹೆಚ್ಚು ಪರೀಕ್ಷೆಗಳು ರದ್ದಾಗಿವೆ ಅಥವಾ ಮುಂದೂಡಲ್ಪಟ್ಟಿವೆ ಮತ್ತು ಪುನಃ ಪರೀಕ್ಷೆ ನಡೆಸಲಾಗಿದೆ. ಅಂದರೆ ಬಹಳ ಹಿಂದೆ ಅಪರೂಪವಾಗುತ್ತಿದ್ದ ಪರೀಕ್ಷಾ ಆಕ್ರಮಗಳು ಇದೀಗ ಸಹಜವಾಗುತ್ತಿದೆ. ಇದು ಕೇವಲ ಅಧಿಕೃತ ಅಂಕಿ ಅಂಶಗಳು ಮಾತ್ರ. ನಮ್ಮ ಅನುಭವದ ಪ್ರಕಾರ ಹೇಳುವುದಾದರೆ ಅನಧಿಕೃತವಾಗಿ ಇದಕ್ಕಿಂತ ಹತ್ತುಪಟ್ಟು ಅವ್ಯವಹಾರಗಳು ಕಣ್ಣಿಗೆ ಕಾಣದಂತೆ ವ್ಯಾಪಕವಾಗಿ ನಡೆಯುತ್ತಿದೆ……

ಅಂದರೆ ನಮ್ಮ ವ್ಯವಸ್ಥೆಯ ನಿಜವಾದ ಆಧಾರ ಸ್ಥಂಭಗಳ ಆಯ್ಕೆಯೇ ಈ ರೀತಿ ಮೂಲದಲ್ಲಿಯೇ ಭ್ರಷ್ಟ ಗೊಂಡಿರುವಾಗ ಇನ್ನು ಆಡಳಿತಾತ್ಮಕ, ರಾಜಕೀಯ ಸುಧಾರಣೆಯ ಮಾತುಗಳಿಗೆ ಯಾವ ಅರ್ಥವಿದೆ. ಶ್ರಮಪಟ್ಟು ಕೆಲಸ ಮಾಡುವ ವ್ಯಕ್ತಿಗಳಿಗೆ ಒಂದು ವ್ಯವಸ್ಥೆಯಲ್ಲಿ ಸರಿಯಾದ ಸ್ಥಾನ ಮಾನ, ಸಾಮಾಜಿಕ ನ್ಯಾಯ, ಶ್ರಮಕ್ಕೆ ತಕ್ಕ ಪ್ರತಿಫಲ ಸಿಗದಿದ್ದರೆ ಆ ಇಡೀ ವ್ಯವಸ್ಥೆ ನಿಧಾನವಾಗಿ ಕುಸಿಯ ತೊಡಗುತ್ತದೆ. ಈಗ ಆಗಿರುವುದು ಅದೇ……

ದೊಡ್ಡ ಮಟ್ಟದ ಅಧಿಕಾರಿಗಳೇ ಆಗಿರಲಿ, ಡಾಕ್ಟರ್, ಇಂಜಿನಿಯರ್, ವಿಜ್ಞಾನಿಗಳಂತ ದೊಡ್ಡ ವೃತ್ತಿಪರರೇ ಆಗಿರಲಿ ಎಲ್ಲರೂ ಸಹ ಈ ರೀತಿಯ ಭ್ರಷ್ಟ ವ್ಯವಸ್ತೆಯಲ್ಲಿ ರೂಪಗೊಂಡಿದ್ದೇಯಾದರೆ ಮಕ್ಕಳ ಮುಂದಿನ ಭವಿಷ್ಯವೇನು. ಇದಕ್ಕೆ ಮತ್ತೊಂದು ಕಂಠಕಪ್ರಾಯವಾಗಿ ಸೃಷ್ಟಿಯಾಗಿರುವುದು ಕೋಚಿಂಗ್ ಸೆಂಟರ್ ಗಳೆಂಬ ಅಕಾಡೆಮಿಗಳು. ಇವು ಒಂದು ತರಬೇತಿಯ ಕೇಂದ್ರವಾಗಿ ಮಾತ್ರ ಉಳಿದಿಲ್ಲ. ಮಕ್ಕಳನ್ನು ಅಂಕಗಳಿಗೆ ಸಿದ್ಧತೆಗೊಳಿಸುವ ಕಾರ್ಖಾನೆಗಳಾಗಿ ಮಾರ್ಪಟ್ಟಿವೆ……

ರಾಜಸ್ಥಾನದ ಕೋಟಾದ ಈ ರೀತಿಯ ತರಬೇತಿ ಕೇಂದ್ರಗಳಲ್ಲಿ ನಡೆಯುತ್ತಿರುವ ಆತ್ಮಹತ್ಯೆಗಳು ಇದಕ್ಕೆ ಒಂದು ಜೀವಂತ ನಿದರ್ಶನ. ಏನನ್ನೂ ಸಾಧಿಸದೆ ಎಲ್ಲವನ್ನು ಸಾಧಿಸಿದಂತೆ ಮಾತನಾಡುತ್ತಿರುವ ಈ ಸಂದರ್ಭದಲ್ಲಿ ಇಡೀ ದೇಶ ಮೌಲ್ಯಗಳ ಕುರಿತು ಚಿಂತಿಸಬೇಕಾಗುತ್ತದೆ. ಮೌಲ್ಯಗಳನ್ನು ಹೊರತುಪಡಿಸಿದ ಯಾವುದೂ ಅಭಿವೃದ್ಧಿಯಾಗಲು ಸಾಧ್ಯವಿಲ್ಲ. ಎಷ್ಟೇ ಸಮಿತಿಗಳನ್ನು ರಚಿಸಿ, ಯಾರು ಎಷ್ಟೇ ವರದಿಗಳನ್ನು ಕೊಟ್ಟರು ಸಮಾಜದಲ್ಲಿ ಕುಸಿಯುತ್ತಿರುವ ನೈತಿಕ ಮೌಲ್ಯಗಳು ಮತ್ತು ಹೆಚ್ಚಾಗುತ್ತಿರುವ ಹಣ, ಅಧಿಕಾರ ಕೇಂದ್ರೀಕೃತ ಮಾನವನ ವಿಕೃತ ಸ್ವಭಾವಗಳು, ಅನಿವಾರ್ಯತೆಗಳು ಅಕ್ರಮಗಳನ್ನು ಹೆಚ್ಚು ಹೆಚ್ಚು ಮಾಡುತ್ತಿದೆ…….

ಕಾನೂನುಗಳು ಚಾಪೆಯಂತೆ ಇದ್ದರೆ ಈ ಭ್ರಷ್ಟ ಅಪರಾಧಿಗಳು ರಂಗೋಲಿ ಕೆಳಗೆ ನುಗ್ಗುವ ಕೆಲಸ ಮಾಡುತ್ತಿದ್ದಾರೆ. ದೇಶದಾದ್ಯಂತ ಅನೇಕ ವಿದ್ಯಾರ್ಥಿಗಳು ಮತ್ತು ಪೋಷಕರು ದೊಡ್ಡಮಟ್ಟದ ಪ್ರತಿಭಟನೆ ನಡೆಸುವಾಗ ನಿಜಕ್ಕೂ ಮನಸ್ಸು ವಿಹ್ಲವ ಗೊಂಡಿದೆ. ಇನ್ನೂ ಈ ವ್ಯವಸ್ಥೆಯನ್ನು ಸರಿಯಾಗಿ ಅರ್ಥಮಾಡಿಕೊಳ್ಳದ ಎಳೆ ವಯಸ್ಸಿನ ವಿದ್ಯಾರ್ಥಿಗಳು, ನ್ಯಾಯಕ್ಕಾಗಿ ಪ್ರತಿಭಟಿಸುವ ದುಸ್ಥಿತಿ ಮತ್ತು ತಾವೇ ಅದರ ಒಂದು ಭಾಗವಾಗುವ ವಿಚಿತ್ರ ಪರಿಸ್ಥಿತಿ ನಮ್ಮಲ್ಲಿದೆ….

ಮೊದಲೇ ಹೇಳಿದಂತೆ ಇದಕ್ಕೆ ದಿಢೀರನೆ ಎಷ್ಟೇ ಕಠಿಣ ಕಾನೂನುಗಳನ್ನು ಜಾರಿಗೆ ತಂದರೂ ಸಮಸ್ಯೆ ಅಷ್ಟು ಸುಲಭವಾಗಿ ಪರಿಹಾರವಾಗುವುದಿಲ್ಲ‌. ಅಕ್ರಮಗಳ ರೂಪ ಬೇರೆಯಾಗಬಹುದು, ಆದರೆ ಬೇರೆ ಒಳದಾರಿಗಳ ಮುಖಾಂತರ ಅವರು ನುಸುಳುತ್ತಲೇ ಇರುತ್ತಾರೆ. ಆದ್ದರಿಂದ ಸಮಾಜದಲ್ಲಿ ನೈತಿಕ ಮೌಲ್ಯಗಳ ಪುನರ್ ಸ್ಥಾಪನೆ ಒಂದೇ ಇದಕ್ಕಿರುವ ಏಕೈಕ ಪರ್ಯಾಯ ಮಾರ್ಗ‌.
ಕೆಟ್ಟ ಹಣ, ಕೆಟ್ಟ ಅಧಿಕಾರ, ಕೆಟ್ಟ ಮಾರ್ಗಗಳನ್ನು ಕನಿಷ್ಠ ಯುವ ಜನತೆಯಾದರೂ ತಿರಸ್ಕರಿಸುವಂತಹ ಮನೋಭಾವವನ್ನು ಸೃಷ್ಠಿಸಬೇಕಿದೆ‌…….

ಇದು ಕಷ್ಟವಾದರೂ ಅಸಾಧ್ಯವಲ್ಲ. ಮಕ್ಕಳು ಬಿಳಿಯ ಹಾಳೆ ಇದ್ದಂತೆ. ಅದರ ಮೇಲೆ ಅತ್ಯುತ್ತಮ ಆದರ್ಶಗಳನ್ನು ಮೂಡಿಸುವ ಕೆಲಸ ಹಿರಿಯರದು. ಆ ನಿಟ್ಟಿನಲ್ಲಿ ಪ್ರಯತ್ನಗಳಾಗಲಿ, ಮಾನವೀಯ ಮೌಲ್ಯಗಳ ಶಿಕ್ಷಣಕ್ಕೆ ಅಡಿಪಾಯ ಈಗಿನಿಂದಲೇ ಪ್ರಾರಂಭವಾಗಲಿ ಎಂದು ಮನವಿ ಮಾಡಿಕೊಳ್ಳುತ್ತಾ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನ ಮಟ್ಟ ಸುಧಾರಣೆಯ ಗುರಿಯೊಂದಿಗೆ, ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ, ಮನಸ್ಸುಗಳ ಅಂತರಂಗದ ಚಳವಳಿ,
ವಿವೇಕಾನಂದ. ಎಚ್‌. ಕೆ. 9844013068……..

About Author

Leave a Reply

Your email address will not be published. Required fields are marked *